BELTHANGADI
ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕೊಲೆ ಯತ್ನ ದೂರು ದಾಖಲು
ಹಿಂದೂ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕೊಲೆ ಯತ್ನ ದೂರು ದಾಖಲು
ಬೆಳ್ತಂಗಡಿ, ನವಂಬರ್ 07: ಹಿಂದೂ ಸಂಘಟನೆ ಮುಖಂಡ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೊಲೆ ಯತ್ನ ದೂರು ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ತಿಮರೋಡಿ ಪ್ರದೇಶದಲ್ಲಿ ಜಾಗದ ವಿಚಾರಕ್ಕೆ ಸಂಬಂಧಪಟ್ಟಂತೆ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಪ್ರಕಾಶ್ ಸೆರಾವೋ ಎಂಬಾತ ದೂರು ನೀಡಿದ್ದಾರೆ.
ಮಹೇಶ್ ಶೆಟ್ಟಿ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಲು ಬೇಲಿ ಹಾಕಿದ್ದು,ಇದನ್ನು ಪ್ರಶ್ನಿಸಿದಕ್ಕೆ ಕೊಲೆ ಬೆದರಿಕೆ ಹಾಕಿದ್ದಾರೆ.
ಬೆಂಬಲಿಗರ ಜೊತೆ ಬಂದು ಮಾರಾಕಾಯುಧಗಳಿಂದ ಹತ್ಯೆ ಯತ್ನ ನಡೆಸಿದ್ದಾರೆ ಅಂತಾ ಪ್ರಕಾಶ್ ಸೆರಾವೋ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿದ ಬೆನ್ನಲ್ಲೇ ತಿಮರೋಡಿ ಮತ್ತು ಬೆಂಬಲಿಗರು ಪರಾರಿಯಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
You must be logged in to post a comment Login