Connect with us

    BANTWAL

    ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ- ಇಬ್ಬರು ಆರೋಪಿಗಳ ಬಂಧನ..!

    ಬಂಟ್ವಾಳ, ಜುಲೈ 28: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬವರನ್ನು ಪೋಲೀಸರು ಬಂಧಿಸಿದ್ದಾರೆ.

    ಬಂಟ್ವಾಳ ಡಿ.ವೈ.ಎಸ್. ಪಿ.ಕಚೇರಿಯ ಸಿಬ್ಬಂದಿ ಪ್ರಸ್ತುತ ಎನ್. ಐ.ಎ.ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕುಮಾರ್ ಎಂಬ ಪೊಲೀಸ್ ಸಿಬ್ಬಂದಿಯ ಕುಟುಂಬದ ಮೇಲೆ ಮಾನಭಂಗಕ್ಕೆ ಯತ್ನ ನಡೆಸಿದ್ದಾರೆ ಎಂದು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಸದ್ಯ ಆರೋಪಿಗಳು ಪೊಲೀಸರ ಅತಿಥಿಯಾಗಿದ್ದು, ತನಿಖೆ ಮುಂದುವರಿದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply