ಹಾಸನ, ಜುಲೈ 04: ಜಿಲ್ಲೆಯ ಸಕಲೇಶಪುರ ಪಟ್ಟಣದ, ಮಳಲಿ ಬೈಪಾಸ್ನಲ್ಲಿಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಅಗ್ನಿಶಾಮಕದಳ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ರಕ್ಷಿಸಿದ ಘಟನೆ ನಡೆದಿದೆ.
ಹಾಸನ ಮೂಲದ ಚಿರಂತ್ (38) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಚಿರಂತ್ ರಾಷ್ಟ್ರೀಯ ಹೆದ್ದಾರಿ 75ರ ಬಿಎಂ ರಸ್ತೆಯ ಮಳಲಿ ಬೈಪಾಸ್ನಲ್ಲಿರುವ ಹೇಮಾವತಿ ಸೇತುವೆಯಿಂದ ನದಿಗೆ ಜಿಗಿದಿದ್ದಾನೆ. ಚಿರಂತ್ ಜಿಗಿದಿದ್ದನ್ನು ಕಂಡು ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ನೀರು ಕಡಿಮೆ ಇದ್ದ ಕಾರಣ ಚಿರಂತ್ ಮರಳಿನ ಮೇಲೆ ಬಿದ್ದಿದ್ದಾನೆ. ಸದ್ಯ ಅಗ್ನಿಶಾಮಕದಳ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ಚಿರಂತ್ನನ್ನು ರಕ್ಷಿಸಲಾಗಿದೆ. ಆತಹತ್ಯೆಗೆ ಯತ್ನಿಸಲು ನಿಖರ ಕಾರಣ ತಿಳಿದು ಬಂದಿಲ್ಲ. ಸಕಲೇಶಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.