KARNATAKA
SSLC ವಿದ್ಯಾರ್ಥಿಗಳಿಗೆ `ಹಾಜರಾತಿ’ ಕಡ್ಡಾಯವಲ್ಲ : ಸಚಿವ ಸುರೇಶ್ ಕುಮಾರ್
ಬೆಂಗಳೂರು, ಎಪ್ರಿಲ್ 02 : ಬೆಂಗಳೂರಿನಲ್ಲಿ ಕೊರೊನಾ ವೈರಸ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 9 ನೇ ತರಗತಿವರೆಗೆ ಶಾಲೆಗಳನ್ನು ಮುಚ್ಚಲು ಸರ್ಕಾರ ತೀರ್ಮಾನಿಸಿದೆ. ಇದು ಮುಂದಿನ 15 ದಿನಗಳವರಗೆ ಇರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿ ಕೊರೊನಾ ವೈರಸ್ ಆರ್ಭಟ ಹೆಚ್ಚಿರುವ ಹಿನ್ನೆಲೆಯಲ್ಲಿ ಸದ್ಯ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಜೊತೆಗೆ ಚರ್ಚಿಸಲಾಗಿಇದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಈ ನಿರ್ದಾರ ತೆಗೆದುಕೊಳ್ಳಲಾಗಿದೆ ಎಂದರು.
ಇನ್ನು 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದೆ. 10 ನೇ ತರಗತಿ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯವಲ್ಲ. ಮಕ್ಕಳ ಅರೋಗ್ಯದ ರಕ್ಷಣೆ ಮುಖ್ಯ. ಆದ್ದರಿಂದ ಬೆಂಗಳೂರಿನ ಶಾಲೆಗಳು 10 ನೇ ತರಗತಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.