BELTHANGADI
ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ – ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರ ವಿರುದ್ಧ ಪ್ರಕರಣ

ಉಜಿರೆ ಸೆಪ್ಟೆಂಬರ್ 04 : ಪರಿಶಿಷ್ಠ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡದವರು ಸೆಪ್ಟೆಂಬರ್ 2 ರಂದು ಹಲ್ಲೆ ನಡೆಸಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆ ಗ್ರಾಮದ ಬಡೆಕೊಟ್ಟು ನಿವಾಸಿ ಭಾಸ್ಕರ ನಾಯ್ಕ ಅವರ ಮೇಲೆ ಸೆಪ್ಪೆಂಬರ್ 2ರಂದು ಸಂಜೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡದವರು ಹಲ್ಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ವಾಹಿನಿಯೊಂದಕ್ಕೆ ಸಂದರ್ಶನ ನೀಡಲು ಮಂಗಳೂರಿಗೆ ತೆರಳಿದ್ದ ನಾನು ಮನೆಗೆ ವಾಪಸಾಗುವ ಸಂದರ್ಭದಲ್ಲಿ ಉಜಿರೆ ಗ್ರಾಮದ ಪಾಣೆಯಾಲು ಎಂಬಲ್ಲಿ ಮಹೇಶ್ ಶೆಟ್ಟಿ ತಿಮರೋಡಿ, ಮೋಹನ್ ಶೆಟ್ಟಿ ಪಾಣೆಯಾಲು, ಮುಖೇಶ್ ಶೆಟ್ಟಿ, ಪ್ರಜ್ವಲ್ ಗೌಡ, ನೀತು ಶೆಟ್ಟಿ ಪಾಣೆಯಾಲು ಮತ್ತು ಇತರರು ಕಾರಿನಲ್ಲಿ ಬಂದು ತಡೆದು ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ್ದಾರೆ’ ಎಂದು ಭಾಸ್ಕರ ನಾಯ್ಕ ದೂರು ನೀಡಿದ್ದಾರೆ. ಭಾಸ್ಕರ ನಾಯ್ಕ ಭಾನುವಾರ ದೂರು ನೀಡಿದ್ದು, ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.