DAKSHINA KANNADA
ಆಟೋ ಮತ್ತು ಬೈಕ್ ನಡುವೆ ಅಪಘಾತ – ಬೈಕ್ ಸವಾರ ಚೇತನ್ ಸಾ*ವು
ಪುತ್ತೂರು ಫೆಬ್ರವರಿ 05: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಮುರ ಎಂಬಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ತಾಲೂಕಿನ ಕೆಮ್ಮಿಂಜೆ ನಿವಾಸಿ ಚೇತನ್(44) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಬೈಕ್ ಹಾಗೂ ಆಟೋ ರಿಕ್ಷಾ ಮಧ್ಯೆ ಈ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿ ಚೇತನ್ ಜತೆಗೆ ಇನ್ನೊರ್ವ ಬಾಲಕ ಕೂಡ ಇದ್ದ ಎಂದು ತಿಳಿದು ಬಂದಿದೆ. ಚೇತನ್ ಅವರು ನೆಹರೂ ನಗರದ ಮತಾವುನಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದು, ಅಲ್ಲಿಂದ ಬಾಲಕನನ್ನು ಅಂಗಡಿಗೆ ಕರೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.