Connect with us

DAKSHINA KANNADA

ಪುತ್ತೂರು – ಆಟೋ ರಿಕ್ಷಾಗೆ ಡಿಕ್ಕಿ ಹೊಡೆದ ಕಾರು – ಮೂವರಿಗೆ ಗಾಯ

ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ರಿಕ್ಷಾ ಚಾಲಕ ಸಹಿತ ಅದರಲ್ಲಿ ಇದ್ದ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ.


ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಯಸ್. ಐ. ರಾಮ ನಾಯ್ಕ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.