Connect with us

BELTHANGADI

ಬೆಳ್ತಂಗಡಿ – ಅಟೋ ರಿಕ್ಷಾ ಚಾಲನೆ ವೇಳೆ ಹಾರ್ಟ್ ಅಟ್ಯಾಕ್ – ಚಾಲಕ ನಿಧನ

ಬೆಳ್ತಂಗಡಿ ಜೂನ್ 03: ರಿಕ್ಷಾ ಚಾಲನೆ ವೇಳೆಯೇ ಹೃದಯಾಘಾತದಿಂದ ಚಾಲಕ ಸಾವನಪ್ಪಿದ ಘಟನೆ ಇಂದು ಬೆಳಿಗ್ಗೆ ಕೊಕ್ಕಡ ಸಮೀಪದ ಕೆಂಪಕೋಡಿನಲ್ಲಿ ನಡೆದಿದೆ.


ಮೃತರನ್ನು ಕೆಂಪಕೋಡು ನಿವಾಸಿ ಶರತ್ ಕುಮಾರ್ ಕೆ (36) ಎಂದು ಗುರುತಿಸಲಾಗಿದೆ. ಶರತ್ ಕುಮಾರ್ ಅವರು ಪ್ರತಿದಿನದಂತೆ ಇಂದು ಬೆಳಿಗ್ಗೆ ತಮ್ಮ ಆಟೋದಲ್ಲಿ ವಿದ್ಯಾರ್ಥಿಗಳನ್ನು ಶಾಲೆಗೆ ಬಿಟ್ಟು ವೇಳೆ ಮರಳುತ್ತಿದ್ದರು. ಈ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ರಿಕ್ಷಾ ಚಲಾಯಿಸುವ ನಡುವೆಯೇ ನಿಧನರಾದರು.

ಕೂಡಲೇ ಗಮನಿಸಿದ ಸ್ಥಳೀಯರು ಶರತ್‌ ಅವರನ್ನು ಕೊಕ್ಕಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಲುಪಿಸಿದರು. ಆದರೆ, ಅದಾಗಲೇ ಅವರು ನಿಧನ ಹೊಂದಿದ್ದರು. ಕುಟುಂಬದ ಏಕೈಕ ಆಧಾರಸ್ತಂಭವಾಗಿದ್ದ ಶರತ್ ಕುಮಾರ್ ಅವರು ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *