DAKSHINA KANNADA
ಆಟೋ ಚಾಲಕ ಧನರಾಜ್ ಮಿಸ್ಸಿಂಗ್
ವಿಟ್ಲ ಡಿಸೆಂಬರ್ 04: ಆಟೋ ತೆಗೆದುಕೊಂಡು ಬಾಡಿಗೆಗೆ ಹೋಗಿದ್ದ ಆಟೋ ಚಾಲಕನೊಬ್ಬ ನಾಪತ್ತೆಯಾದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೀರಕಂಬ ಗ್ರಾಮದ ಬಾಯಿಲ ನಿವಾಸಿ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ. ನವೆಂಬರ್ 28 ರಂದು ಬೆಳಿಗ್ಗೆ ಆಟೋ ತೆಗೆದುಕೊಂಡು ಹೋಗಿದ್ದಾರೆ. ಬಳಿಕ ಡಿಸೆಂಬರ್ 3 ರವರೆಗೆ ಮನೆಗೆ ಬಂದಿಲ್ಲ. ಈ ಬಗ್ಗೆ ಸಂಬಂಧಿಕರಲ್ಲಿ, ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ.
ಧನರಾಜ್‌ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು ಆತನ ಮೊಬೈಲ್ ನಂಬ್ರ ಸ್ವೀಚ್ ಆಫ್ ಆಗಿರುತ್ತದೆ. ಮನೆಗೂ ಬಾರದೆ ಸಂಬಂಧಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ಕಾಣೆಯಾದ ಧನರಾಜ್‌ನನ್ನು ಪತ್ತೆಮಾಡಿ ಕೊಡಬೇಕಾಗಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.