DAKSHINA KANNADA
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ

ವಿಟ್ಲ ಫೆಬ್ರವರಿ 18 : ಆಟೊ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ಶನಿವಾರ ನಡೆದಿದೆ.
ಮೃತರನ್ನು ಆಟೊ ಚಾಲಕ ದಿನೇಶ್ ಬೈರಿಕಟ್ಟೆ (32) ಎಂದು ಗುರುತಿಸಲಾಗಿದೆ. ಅವಿವಾಹಿತರಾಗಿದ್ದ ದಿನೇಶ್, ಆಟೊ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದು, ಇಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಆತ್ಮಹತ್ಯೆ ಕಾರಣ ತಿಳಿದು ಬಂದಿಲ್ಲ.
