DAKSHINA KANNADA
ಸುಳ್ಯ: ವಾಹನ ಅಪಘಾತಕ್ಕೆ ಐಟಿಐ ವಿದ್ಯಾರ್ಥಿ ಸಾವು..!

ಸುಳ್ಯ: ವಾಹನ ಅಪಘಾತಕ್ಕೆ ಐಟಿಐ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಸಂಭವಿಸಿದೆ.
ಸುಳ್ಯ ತಾಲೂಕಿನ ಪೆರಾಜೆ ಬಳಿಯ ಕಲ್ಚರ್ಪೆ ಎಂಬಲ್ಲಿಈ ಅಪಘಾತ ಸಂಭವಿಸಿದ್ದು ದ್ವಿಚಕ್ರ ವಾಹನಕ್ಕೆ ಆಟೋ ಮತ್ತು ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದ್ದು ಚೆಂಬು ಗ್ರಾಮದ ಕುದ್ರೆಪಾಯ ಬೊಳ್ಳೂರು ಆನಂದ ಎಂಬವರ ಪುತ್ರ ನವೀನ್ (23) ಮೃತಪಟ್ಟ ದುರ್ದೈವಿಯಾಗಿದ್ದಾರೆ. ನ ವೀನ್ ಸುಳ್ಯದ ಖಾಸಗಿ ಕಾಲೇಜಿನ ಐಟಿಐ ವಿದ್ಯಾರ್ಥಿಯಾಗಿದ್ದ ಎಂದು ತಿಳಿದು ಬಂದಿದ್ದು ಸ್ಥಳೀಯ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.
