BANTWAL
ರಿಕ್ಷಾ ಹಾಗೂ ಕಾರಿನ ನಡುವೆ ಅಪಘಾತ – ಓರ್ವ ಮಹಿಳೆಗೆ ಗಂಭೀರ ಗಾಯ
ಬಂಟ್ವಾಳ ಅಗಸ್ಟ್ 27 : ರಿಕ್ಷಾ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಸಜಿಪ ಸಮೀಪದ ಕೋಟೆಕಣಿ ಎಂಬಲ್ಲಿ ನಡೆದಿದೆ.
ಗಾಯಗೊಂಡವರನ್ನು ಕಂಚಿನಡ್ಕ ಪದವು ನಿವಾಸಿ ಅಸಿಯಮ್ಮ ಎಂದು ಗುರುತಿಸಲಾಗಿದೆ. ಮಂಗಳೂರು ಖಾಸಗಿ ಆಸ್ಪತ್ರೆಯ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಲೆತ್ತೂರಿನಿಂದ ರಿಕ್ಷಾದಲ್ಲಿ ಕೋಟೆಕಣಿಯ ಸಂಬಂಧಿಕರ ಮನೆಗೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.
You must be logged in to post a comment Login