Connect with us

DAKSHINA KANNADA

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ

ಸುಳ್ಯ ಡಿಸೆಂಬರ್ 14: ಸುಳ್ಯದಲ್ಲಿ ಮನೆಮಾತಾಗಿದ್ದ ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತ ದೇಹದ ಹತ್ತಿರ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಅಸೌಖ್ಯದ ಹಿನ್ನಲೆಯಲ್ಲಿ ತನಗೆ ಬದುಕಲು ಕಷ್ಟವಾಗುತ್ತಿದೆ, ಮನೆಯವರಿಗೂ ಕಷ್ಟ ಕೊಡಲು ಮನಸ್ಸಿಲ್ಲ, ಹೀಗಾಗಿ ನಿಮ್ಮನ್ನೆಲ್ಲಾ ಬಿಟ್ಟು ಹೋಗುತ್ತಿದ್ದೇನೆ ಎಂದು ಅವರು ಅದರಲ್ಲಿ ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ ತನ್ನ ಮರಣದ ಕಾರಣದಿಂದ ಬಸ್‌ಗಳ ಓಡಾಟವನ್ನು ನಿಲ್ಲಿಸಬಾರದು. ಕಪ್ಪು ಫ್ಲ್ಯಾಗ್ ಹಾಕಿ ಬಸ್ ಓಡಿಸಬೇಕು ಎಂದೂ ಅದರಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ.

80ರ ದಶಕದಲ್ಲಿ ಸುಳ್ಯದಂತಹ ಗ್ರಾಮೀಣ ಪ್ರದೇಶದಲ್ಲಿ ಬಸ್ ಸೌಕರ್ಯ ಕಲ್ಪಿಸಿ ಸಾವಿರಾರು ಜನರು ತಮ್ಮ ದೈನಂದಿನ ಕೆಲಸ ನಿರ್ವಹಿಸಲು ಅವಕಾಶ ಮಾಡಿದ್ದರು. ಈಗಲೂ ಸುಳ್ಯ ಪರಿಸರದ ಹಲವು ಮಾರ್ಗಗಳಲ್ಲಿ ಬಸ್ ಸಂಚಾರ ನಡೆಸುತ್ತಿದೆ.

Advertisement
Click to comment

You must be logged in to post a comment Login

Leave a Reply