Connect with us

KARNATAKA

ಮಂಡ್ಯದಲ್ಲಿ ಹುಡುಗರ ಮುಂದೆ ʼಅಲ್ಲಾಹು ಅಕ್ಬರ್’ ಘೋಷಣೆ ಕೂಗಿದ ವಿದ್ಯಾರ್ಥಿನಿ 5 ಲಕ್ಷ ಬಹುಮಾನ

ನವದೆಹಲಿ: ಮಂಡ್ಯದಲ್ಲಿ ಹುಡುಗರ ಮುಂದೆ ʼಅಲ್ಲಾಹು ಅಕ್ಬರ್’ ಎಂದು ಘೋಷಣೆ ಕೂಗಿದ ಪಿಇಎಸ್‌ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ಗೆ ಜಮಾತ್‌ ಉಲೆಮಾ-ಎ-ಹಿಂದ್‌ 5 ಲಕ್ಷ ಬಹುಮಾನ ಪ್ರಕಟಿಸಿದೆ.


ಕಾಲೇಜಿನಲ್ಲಿ ಹುಡುಗರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾಗ ಮುಸ್ಕಾನ್‌ ‘ಅಲ್ಲಾಹು ಅಕ್ಬರ್’ ಎಂದು ಕೂಗಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್‌ ವೈರಲ್‌ ಆಗಿದೆ. ವೈರಲ್‌ ಆದ ಬೆನ್ನಲ್ಲೇ ಜಮಾತ್‌ ಉಲೆಮಾ-ಎ-ಹಿಂದ್‌ ಟ್ವೀಟ್‌ ಮಾಡಿ 5 ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.


ನಾನು ಎಂದಿನಂತೆ ಬುರ್ಕಾ ಧರಿಸಿ ಕಾಲೇಜು ಪ್ರವೇಶಿಸಿದೆ. ಈ ವೇಳೆ ಗುಂಪೊಂದು ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿತು. ನಾನು ಪ್ರತಿಯಾಗಿ ‘ಅಲ್ಲಾಹು ಅಕ್ಬರ್’ ಎಂದು ಕೂಗಿದೆ. ಆ ಗುಂಪಿನಲ್ಲಿದ್ದವರಲ್ಲಿ ಕೇವಲ ಶೇ.10ರಷ್ಟು ಮಂದಿ ಮಾತ್ರ ನಮ್ಮ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಉಳಿದ 90 ಪ್ರತಿಶತ ಯುವಕರು ಹೊರಗಿನಿಂದ ಬಂದವರಾಗಿದ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *