LATEST NEWS
ಲೋಕಸಭೆ ಚುನಾವಣೆ ಸಮೀಕ್ಷೆ ಸುಳ್ಳಾಗಿದ್ದಕ್ಕೆ ಲೈವ್ ನಲ್ಲೇ ಕಣ್ಣೀರಿಟ್ಟ ಆಕ್ಸಿಸ್ ಮೈ ಇಂಡಿಯಾ ಅಧ್ಯಕ್ಷ ಪ್ರದೀಪ್ ಗುಪ್ತಾ

ಹೊಸದಿಲ್ಲಿ ಜೂನ್ 04 : ಲೋಕಸಭೆ ಚುನಾವಣೆಯಲ್ಲಿ ಫಲಿತಾಂಶದ ಬಗ್ಗೆ ಬಂದ ಎಳ್ಲಾ ಚುನಾವಣಾ ಸಮೀಕ್ಷೆಗಳು ಸಂಪೂರ್ಣ ತಲೆಕೆಳಗಾಗಿದ್ದು, ಈ ನಡುವೆ ಎಕ್ಸಿಟ್ ಪೋಲ್ ಫಲಿತಾಂಶ ಉಲ್ಟಾ ಹೊಡೆದಿದ್ದಕ್ಕೆ ಆಕ್ಸಿಸ್ ಮೈ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಇಂಡಿಯಾ ಟುಡೇ ಟಿ ವಿ ಲೈವ್ ಕಾರ್ಯಕ್ರಮದಲ್ಲಿ ಕಣ್ಣೀರು ಹಾಕಿದ ಘಟನೆ ನಡೆದಿದೆ.
ಇಂಡಿಯಾ ಟುಡೆಯ ಚುನಾವಣಾ ಫಲಿತಾಂಶಗಳ ಲೈವ್ ಕವರೇಜ್‌ನಲ್ಲಿ ಕಾಣಿಸಿಕೊಂಡ ಗುಪ್ತಾ, ಕಣ್ಣೀರಿಡುತ್ತಿದ್ದಂತೆ ನಿರೂಪಕರು ಅವರಿಗೆ ಸಾಂತ್ವನ ಹೇಳಿದರು. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಪ್ರಕಾರ, ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ 361-401 ಸ್ಥಾನಗಳನ್ನು ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು. INDIA ಒಕ್ಕೂಟವು 131-166 ಸ್ಥಾನಗಳನ್ನು ಗೆಲ್ಲಲಿದೆ, ಸಮೀಕ್ಷೆಗಳ ಪ್ರಕಾರ ಇತರ ಪಕ್ಷಗಳು 8 ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿತ್ತು.

ಶನಿವಾರದ ಅಂತಿಮ ಸುತ್ತಿನ ಮತದಾನದ ನಂತರ ಬಿಡುಗಡೆಯಾದ ಬಹುಪಾಲು ಎಕ್ಸಿಟ್ ಪೋಲ್‌ಗಳು ಬಿಜೆಪಿ ಮತ್ತು ಎನ್‌ಡಿಎ ಮುನ್ನಡೆ ಸಾಧಿಸಲಿವೆ ಎಂದು ತೋರಿಸಿದ್ದವು. ಇಂದು ಮತ ಎಣಿಕೆಯ ಬಳಿಕ INDIA ಒಕ್ಕೂಟ ಹೆಚ್ಚು ಸ್ಥಾನ ಗಳಿಸುತ್ತಿದ್ದಂತೆ ಚುನಾವಣಾ ಸಮೀಕ್ಷೆಗಳು ಸುಳ್ಳಾದವು. ಸಮೀಕ್ಷೆಗಳ ಸತ್ಯಾಸತ್ಯತೆಯ ಕುರಿತು ಪ್ರಶ್ನೆಗಳು ಏಳುತ್ತಿದ್ದಂತೆ ಆಕ್ಸಿಸ್ ಮೈ ಇಂಡಿಯಾ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್ ಗುಪ್ತಾ ಲೈವ್ ಕಾರ್ಯಕ್ರಮದಲ್ಲೇ ಕಣ್ಣೀರು ಹಾಕಿದ್ದಾರೆ.