Connect with us

    LATEST NEWS

    ಅಯೋಧ್ಯೆಯಲ್ಲಿ ರಾಮ ಪ್ರತಿಷ್ಠಾಪನೆ – ಉರುಳು ಸೇವೆ ಮಾಡುವ ಮೂಲಕ ಹರಕೆ ತಿರಿಸಿದ ಶಾಸಕ ವೇದವ್ಯಾಸ್ ಕಾಮತ್

    ಮಂಗಳೂರು ಜನವರಿ 22: ಅಯೋಧ್ಯೆಯಲ್ಲಿ ಇಂದು ಶ್ರೀರಾಮನ ಪ್ರಾಣಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು, ಈ ನಡುವೆ ಅಯೋಧ್ಯೆ ರಾಮಮಂದಿರಕ್ಕಾಗಿ ಹರಕೆ ಹೊತ್ತಿದ್ದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ರ ವರಿಂದ ಇಂದು ಮುಖ್ಯಪ್ರಾಣ ದೇವಸ್ಥಾನದಲ್ಲಿ ಉರುಳು ಸೇವೆ ಸಲ್ಲಿಸಿದ್ದರು


    ಅಯೋಧ್ಯೆಯಲ್ಲಿ ರಾಮ ಮಂದಿರ ಆಗಬೇಕೆಂದು ಈ ಹಿಂದೆ ಉರುಳು ಸೇವೆ ಸಲ್ಲಿಸುತ್ತೇನೆಂದು ಮನಸ್ಸಲ್ಲಿ ಪ್ರಾರ್ಥಿಸಿದ್ದರು. ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಸುಸಂದರ್ಭದಲ್ಲಿ, ರಾಮಮಂದಿರ ಕಾರ್ಯ ನಿರ್ವಿಘ್ನವಾಗಿ ನಡೆಯುವಂತಾಗಲಿ, ಆ ಮೂಲಕ ಲೋಕಕ್ಕೆ ಒಳಿತಾಗಲಿ ಎಂದು ಈ ಹಿಂದೆ ನಗರದ ಬಜಿಲಕೇರಿಯ ಮುಖ್ಯಪ್ರಾಣ ದೇವಸ್ಥಾನದಲ್ಲಿ ವಿಶೇಷ ಸಂಕಲ್ಪ ಕೈಗೊಂಡಿದ್ದ ಮಂಗಳೂರು ನಗರ ದಕ್ಷಿಣ ಶಾಸಕರಾದ ಶ್ರೀ ಡಿ. ವೇದವ್ಯಾಸ್ ಕಾಮತ್ ಅವರು ಉರುಳು ಸೇವೆ ಮಾಡುವ ಮೂಲಕ ತಮ್ಮ ಹರಕೆಯನ್ನು ತೀರಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply