National
ಅಯೋಧ್ಯೆಯಲ್ಲಿ ಸಿದ್ಧಗೊಳ್ಳುತ್ತಿವೆ ಲಕ್ಷಾಂತರ ಲಡ್ಡು, ಯಾಕೆ ಗೊತ್ತೇ ?

ಲಕ್ನೋ : ಹಲವಾರು ವರ್ಷಗಳ ವಿವಾದದ ಬಳಿಕ ಇದೀಗ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಭವ್ಯ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಯೋಧ್ಯೆ ರಾಮಜನ್ಮಭೂಮಿ ವಿಚಾರದಲ್ಲಿದ್ದ ವಿವಾದವನ್ನು ಸುಪ್ರೀಂಕೋರ್ಟ್ ಸೌಹಾರ್ಧಯುತವಾಗಿ ಬಗೆಹರಿಸಿದ ಬಳಿಕ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಪ್ರಕ್ರಿಯೆಗೆ ಚಾಲನೆ ದೊರೆತಿದೆ.
ಶ್ರೀರಾಮ ಮಂದಿರದ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಅಯೋಧ್ಯೆ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಶಿಲಾನ್ಯಾಸದ ದಿನದಂದು ಅಯೋಧ್ಯೆಗೆ ಬರುವ ಜನರಿಗಾಗಿ ಹಂಚಲು ಲಡ್ಡುಗಳ ತಯಾರಿ ಕಾರ್ಯ ಭರದಿಂದ ನಡೆಯುತ್ತಿದೆ. 1.11 ಲಕ್ಷ ಲಡ್ಡುಗಳನ್ನು ತಯಾರಿಸಲಾಗುತ್ತಿದ್ದು, ಅಯೋಧ್ಯೆಯ ಮಣಿ ರಾಮ್ ದಾಸ್ ಚೌನಿಯಲ್ಲಿ ಲಡ್ಡುಗಳು ಸಿದ್ಧಗೊಳ್ಳುತ್ತಿವೆ. ರಾಮಮಂದಿರ ಶಿಲಾನ್ಯಾಸದ ಸಂದರ್ಭದಲ್ಲಿ ಉಗ್ರಗಾಮಿಗಳು ಹಿಂಸಾತ್ಮಕ ಕೃತ್ಯ ನಡೆಸಲು ಸಂಚು ರೂಪಿಸಿದ್ದಾರೆ ಎನ್ನುವ ಗುಪ್ತಚರ ಮಾಹಿತಿಯ ಹಿನ್ನಲೆಯಲ್ಲಿ ಅಯೋಧ್ಯೆ ಸುತ್ತಮುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
