ರಾಮ ಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಮಂಗಳೂರಿನಲ್ಲಿ ಬೃಹತ್ ಜನಾಗ್ರಹ ಸಮಾವೇಶ

ಮಂಗಳೂರು ನವೆಂಬರ್ 20: ರಾಮಮಂದಿರ ನಿರ್ಮಾಣಕ್ಕೆ ಒತ್ತಾಯಿಸಿ ಹಾಗೂ ಮಂದಿರ ನಿರ್ಮಾಣಕ್ಕೆ ಅನುಕೂಲವಾಗುವಂತೆ ಸಂಸತ್ತಿನಲ್ಲಿ ಮಸೂದೆ ಜಾರಿಗೊಳಿಸುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್ ಬಜರಂಗದಳ ನವೆಂಬರ್ 25 ರಂದು ಮಂಗಳೂರಿನಲ್ಲಿ ಬೃಹತ್ ಜನಾಗ್ರಹ ಸಭೆಯನ್ನು ಆಯೋಜಿಸಲಾಗಿದೆ.

ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಮಂಗಳೂರಿನಲ್ಲಿ ಆಯೋಜಿಸಲಾಗಿರುವ ಜನಗ್ರಾಹ ಸಭೆಯಲ್ಲಿ ಬಜರಂಗದದಳದ ರಾಷ್ಟ್ರೀಯ ಸಂಯೋಜಕ ಸೋಹನ್ ಸಿಂಗ್ ಸೋಲಂಕಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

ಹಿಂದೂ ಜಾಗರಣ ವೇದಿಕೆ, ಹಿಂದೂ ಯುವಸೇನೆ , ಶ್ರೀರಾಮ ಸೇನೆ ಮೊದಲಾದ ಸಂಘಟನೆಗಳು ಇದಕ್ಕೆ ಬೆಂಬಲ ಸೂಚಿಸಿದ್ದು , ಸಭೆಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಜನಾಗ್ರಹ ಸಭೆಯ ಪೂರ್ವಭಾವಿಯಾಗಿ ನವೆಂಬರ್ 22ರಂದು ಜಿಲ್ಲೆಯ 8 ಕ್ಷೇತ್ರಗಳಲ್ಲಿ ಮಹಾ ಸಂಪರ್ಕ ಅಭಿಯಾನ ನಡೆಯಲಿದೆ. ಕಾರ್ಯಕರ್ತರು ಮನೆ ಮನೆ ಸಂಪರ್ಕ ಮೂಲಕ ಅಭಿಯಾನ ನಡೆಸಲಿದ್ದಾರೆ ಎಂದು ಶರಣ್ ಪಂಪ್‌ವೆಲ್ ತಿಳಿಸಿದರು.

Facebook Comments

comments