LATEST NEWS
ಆಜಾನ್ ವಿವಾದ – ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಕುಂದಾಪುರ ನವೆಂಬರ್ 16:ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟ ಸಂದರ್ಭ ಶಾಲಾ ಮಕ್ಕಳಿಂದ ಆಜಾನ್ ಗೆ ನೃತ್ಯ ಮಾಡಿಸಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದ್ದು, ಘಟನೆ ಖಂಡಿಸಿ ಇಂದು ಹಿಂದೂ ಕಾರ್ಯಕರ್ತರು ಶಾಲಾ ಆಡಳಿತ ಮಂಡಳಿ ವಿರುದ್ದ ಪ್ರತಿಭಟನೆಗೆ ಇಳಿದಿದ್ದಾರೆ.
ಮಂಗಳವಾರ ಮದರ್ ತೆರೆಸಾ ಶಾಲೆಯ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಾಲಾ ಮಕ್ಕಳು ನಡೆಸಿಕೊಟ್ಟ ಸಾಂಸ್ಕೃತಿ ಕಾರ್ಯಕ್ರಮದಲ್ಲಿ ಮಕ್ಕಳು ಆಜಾನ್ ಗೆ ನೃತ್ಯ ಮಾಡಿದ್ದರು, ಇದೀಗ ಈ ವಿಡಿಯೋ ವೈರಲ್ ಆದ ಬೆನ್ನಲ್ಲೆ ಹಿಂದೂ ಕಾರ್ಯಕರ್ತರು ಪ್ರತಿಭಟನೆಗೆ ಇಳಿದಿದ್ದಾರೆ. ಶಾಲೆಯಲ್ಲಿ ಈ ರೀತಿ ಮಾಡಿಸಿದ್ದು ತಪ್ಪು, ಹಿಂದೂ ಹುಡುಗಿಯರಿಂದ ನಮಾಜ್ ಹಾಗೂ ಬಾಂಗ್ ಮಾಡಿಸಿದ್ದರ ಬಗ್ಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.

ಶಿಕ್ಷಣ ಸಂಸ್ಥೆ ಹಾಗೂ ಪ್ರಾಂಶುಪಾಲ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಕಾರ್ಯಕರ್ತರು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಗೋಪಿಕೃಷ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಿದ್ದಾರೆ. ಆದರೆ ಹಿಂದೂ ಸಂಘಟನೆಗಳು ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.