LATEST NEWS
ಕಝಾಕಿಸ್ತಾನ – ಅಜರ್‌ಬೈಜಾನ್ ಏರ್‌ಲೈನ್ಸ್ ಪ್ಯಾಸೆಂಜರ್ ವಿಮಾನ ಪತನ
ಕಝಾಕಿಸ್ತಾನ ಡಿಸೆಂಬರ್ 25: ರಷ್ಯಾಗೆ ತೆರಳುತ್ತಿದ್ದ ಅಜರ್‌ಬೈಜಾನ್ ಏರ್‌ಲೈನ್ಸ್ ಪ್ಯಾಸೆಂಜರ್ ವಿಮಾನ ಕಝಾಕಿಸ್ತಾನದಲ್ಲಿ ಬುಧವಾರ ಪತನಗೊಂಡಿತು. ತಾಂತ್ರಿಕ ಸಮಸ್ಯೆಯಿಂದಾಗಿ ಪೈಲಟ್ ತುರ್ತು ಲ್ಯಾಂಡಿಂಗ್ ಮಾಡುವ ವೇಳೆ ನೆಲಕ್ಕೆ ರಭಸವಾಗಿ ಅಪ್ಪಳಿಸಿ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿತು.
ವಿಮಾನ ಅಜರ್ಬೈಜಾನ್ನ ರಾಜಧಾನಿ ಬಾಕುವಿನಿಂದ ರಷ್ಯಾದ ಗ್ರೋಜ್ನಿಗೆ ತೆರಳುತ್ತಿತ್ತು. ಈ ವೇಳೆ ಮಾರ್ಗಮಧ್ಯೆ ಸಮಸ್ಯೆಗೀಡಾಗಿದೆ. ಕಝಾಕಿಸ್ತಾನದ ಕ್ಯಾಸ್ಪಿಯನ್ ಸಮುದ್ರದ ಸಮೀಪ ಅಪಘಾತಕ್ಕೀಡಾಗಿದೆ. ವಿಮಾನದಲ್ಲಿ ಐವರು ಸಿಬ್ಬಂದಿ ಸೇರಿ 67 ಮಂದಿ ಇದ್ದರು ಎಂದು ತಿಳಿದು ಬಂದಿದೆ.
ಈ ದುರಂತದಲ್ಲಿ ಸಾವಿನ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಅಪಘಾತದಲ್ಲಿ 25 ಜನರು ಬದುಕುಳಿದಿದ್ದಾರೆ” ಎಂದು ಮಾಹಿತಿ ನೀಡಿದೆ. ರಕ್ಷಣಾ ಸಿಬ್ಬಂದಿ ಸ್ಥಳದಲ್ಲಿ ಬೆಂಕಿ ನಂದಿಸಿದ್ದಾರೆ. ಬದುಕುಳಿದ 25 ಮಂದಿಯಲ್ಲಿ 22 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಐವರು ತೀವ್ರ ನಿಗಾ ಘಟಕದಲ್ಲಿದ್ದಾರೆ. 14 ಮಂದಿಗೆ ಸಹಜ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕಝಕ್ ಆರೋಗ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.