LATEST NEWS
ಮನೆಯಲ್ಲೇ ಮತ ಚಲಾಯಿಸಿದ ಕಾಂಗ್ರೇಸ್ ಹಿರಿಯ ಮುಖಂಡ ಜನಾರ್ಧನ ಪೂಜಾರಿ
ಮಂಗಳೂರು ಎಪ್ರಿಲ್ 17 : ಹಿರಿಯ ಕಾಂಗ್ರೆಸ್ ಮುಖಂಡ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರು ಬಂಟ್ವಾಳದಲ್ಲಿರುವ ತಮ್ಮ ನಿವಾಸದಲ್ಲಿಯೇ ಲೋಕಸಭೆ ಚುನಾವಣೆಗೆ ತಮ್ಮ ಮತವನ್ನು ಚಲಾಯಿಸಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ 85 ವರ್ಷ ಮೇಲ್ಪಟ್ಟವರಿಗೆ ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಅವರ ಮನೆಗೆ ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ನಡೆಯುತ್ತಿದೆ.
ಬಂಟ್ವಾಳ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ ಮತ್ತು ಶೇ.40ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡ ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ಎ.15ರಿಂದ ಚಾಲನೆಗೊಂಡಿದೆ. ಇದರನ್ವಯ ಬಿ ಮೂಡ ಗ್ರಾಮದ ಬಸ್ತಿಪಡ್ಪುವಿನಲ್ಲಿರುವ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರ ನಿವಾಸದಲ್ಲಿಯೇ ಅವರ ಮತದಾನ ಪ್ರಕ್ರಿಯೆ ನಡೆಯಿತು.
ಇದುವರೆಗೆ ಜನಾರ್ದನ ಪೂಜಾರಿಯವರು ಬಂಟ್ವಾಳದ ಭಂಡಾರಿಬೆಟ್ಟು ಶಾಲೆಯ ಭಾಗ ಸಂಖ್ಯೆ 130 ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು. ಇದೇ ಮೊದಲ ಬಾರಿಗೆ ಅವರು ಮತವನ್ನು ಮನೆಯಲ್ಲೇ ಚಲಾಯಿಸಿದ್ದಾರೆ.