DAKSHINA KANNADA
ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಬಿ.ಕೆ. ಹರಿಪ್ರಸಾದ್ ನೇಮಕ .!!?
ಬೆಂಗಳೂರು: ಕರ್ನಾಟಕದ ರಾಜಕರಣದಲ್ಲಿ ನಡೆಯುತ್ತಿರುವ ದಿನಕೊಂದು ಬೆಳವಣಿಗೆಗಳ ಮಧ್ಯೆ ರಾಜಧಾನಿ ಬೆಂಗಳೂರಲ್ಲಿ ರಾಜಕೀಯ ಬೆಳವಣಿಗೆ ಗರಿಗೆದುರುತ್ತಿವೆ.ವಾಲ್ಮೀಕಿ ಹಗರಣಗಳಿಂದ ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ನೇಮಕವಾಗುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿದೆ.
ಒಂದೆಡೆ ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿ ಬಿಜೆಪಿ ಜೆಡಿಎಸ್ ಮೈಸೂರು ಚಲೋ ನಡೆಸುತ್ತಿದ್ದರೆ ಇತ್ತ ಅದಕ್ಕೆ ಉತ್ತರವಾಗಿ ಕಾಂಗ್ರೆಸ್ ಶುಕ್ರವಾರ ಮೈಸೂರಿನಲ್ಲಿ ಜನಾಂದೋಲನಾ ಸಮಾವೇಶ ಹಮ್ಮಿಕೊಂಡಿದೆ. ಈ ಮಧ್ಯೆ ವಾಲ್ಮೀಕಿ ಹಗರಣಗಳಿಂದ ನಾಗೇಂದ್ರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಬಿ ಕೆ ಹರಿಪ್ರಸಾದ್ ನೇಮಕವಾಗುವ ಸಾಧ್ಯತೆಗಳು ಹೆಚ್ಚಾಗಿ ಕಂಡುಬರುತ್ತಿದೆ. ಶನಿವಾರ ಸಂಪುಟ ಪುನರ್ ರಚನೆ ಸಾಧ್ಯತೆಗಳು ಹೆಚ್ಚಾಗಿವೆ ಎನ್ನಲಾಗಿದ್ದು ಇದೇ ಸಂದರ್ಭ ಬಿ ಕೆ ಹರಿ ಪ್ರಸಾದ್ ಸಿಎಂ ಸಿದ್ದರಾಮಯ್ಯ ಸಂಪುಟ ಸೇರಲಿದ್ದಾರೆ ಎನ್ನಲಾಗಿದೆ. ಬುಧವಾರ ರಾತ್ರಿ ಬಿ ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ಅವನ್ನು ಭೇಟಿಯಾಗಿ ಚರ್ಚೆ ನಡೆಸಿದ್ದು ಇದಕ್ಕೆ ಪುಷ್ಟಿ ನೀಡಿದೆ. ಎಐಸಿಸಿ ನಾಯಕರು ರಾಜ್ಯಕ್ಕೆ ಭೇಟಿ ನೀಡಿ ವಾಪಸ್ ತೆರಳಿರುವ ಬೆನ್ನಲ್ಲೇ ಸಿಎಂ ಸರ್ಕಾರಿ ನಿವಾಸ ಕಾವೇರಿಗೆ ತೆರಳಿದ ಹರಿಪ್ರಸಾದ್, ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ್ದಾರೆ. ಸುಮಾರು ಒಂದು ಗಂಟೆ ಕಾಲ ಉಭಯ ನಾಯಕರು ಸುದೀರ್ಘ ಚರ್ಚೆ ನಡೆಸಿದ್ದಾರೆ. ವರ್ಷದ ಬಳಿಕ ಉಭಯ ನಾಯಕರು ಮುಖಾಮುಖಿಯಾಗಿ ಸುದೀರ್ಘ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಮೂಡಿಸಿದೆ.