Connect with us

LATEST NEWS

ಬಾಬಾ ಕಾ ಡಾಬಾ ಮಾಲೀಕ ಆತ್ಮಹತ್ಯೆಗೆ ಯತ್ನ: ಆಸ್ಪತ್ರೆಗೆ ದಾಖಲು

ದೆಹಲಿ, ಜೂನ್ 18: ದೆಹಲಿಯಲ್ಲಿ ದಿನ ಬೆಳಗಾಗುವುದರಲ್ಲಿ ದೇಶಾದ್ಯಂತ ಸುದ್ದಿ ಮಾಡಿದ ಬಾಬಾ ಕಾ ಡಾಬಾ ಹೋಟೆಲ್ ಮಾಲೀಕ ಕಾಂತಾ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುರುವಾರ ರಾತ್ರಿ 81 ವರ್ಷದ ವೃದ್ಧ ಕಾಂತಾ ಪ್ರಸಾದ್ ಮದ್ಯದ ಜೊತೆಗೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಕೂಡಲೇ ಮಗ ಕರಣ್ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಂತಾ ಪ್ರಸಾದ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ನಂತರ ಪೊಲೀಸರಿಗೆ ಸುದ್ದಿ ಮಟ್ಟಿದ್ದು, ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

2020ರಲ್ಲಿ ಯೂಟ್ಯೂಬರ್ ಗೌರವ್ ವಾಸನ್, ವೃದ್ಧ ದಂಪತಿ ಹೊಟ್ಟೆಪಾಡಿಗಾಗಿ ಹೋಟೆಲ್ ನಡೆಸುತ್ತಿದ್ದು, ಅವರಿಗೆ ನೆರವಾಗುವಂತೆ ಮನವಿ ಮಾಡಿದ್ದರು. ಈ ವೀಡಿಯೋ ದೇಶಾದ್ಯಂತ ವೈರಲ್ ಆಗಿದ್ದು, ನೆರವಿನ ಮಹಾಪೂರವೇ ಹರಿದು ಬಂದಿತ್ತು. ಆದರೆ ಗೌರವ್ ವಾಸನ್ ವಿರುದ್ಧ ಟೀಕೆ ಮಾಡಿದ್ದ ಕಾಂತಾ ಪ್ರಸಾದ್ ನಂತರ ಕ್ಷಮೆಯಾಚಿಸಿದ್ದರು. ಅಲ್ಲದೇ ಹೊಸ ರೆಸ್ಟೋರೆಂಟ್ ಓಪನ್ ಮಾಡಿದ್ದು ನಷ್ಟದ ಕಾರಣ ಮುಚ್ಚಿದ್ದರು.