KARNATAKA
ರಿಮೋಟ್ ಗೆ ಬಳಸುವ ಶೆಲ್ ನುಂಗಿ ಮಗು ಸಾವು

ಮೈಸೂರು: ಟಿವಿ ರಿಮೋಟ್‌ಗೆ ಬಳಸುವ ಶೆಲ್ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ.
ಮೃತ ಮಗುವನ್ನು ಹೇಮಂತ್ ಸ್ಕಂದಮಣಿರಾಜ್ ಎಂದು ಗುರುತಿಸಲಾಗಿದೆ. ಆಗಸ್ಟ್ 31ರಂದು ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮಗು ಶೆಲ್ ನುಂಗಿತ್ತು. ಬಳಿಕ ಚಿಕಿತ್ಸೆಗಾಗಿ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮುಂಜಾನೆ ಮಗು ಮೃತಪಟ್ಟಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading