KARNATAKA
ಮೊಬೈಲ್ ಚಾರ್ಜರ್ ಪಿನ್ ಬಾಯಿಗೆ ಹಾಕಿದ 8 ತಿಂಗಳ ಮಗುವಿಗೆ ಕರೆಂಟ್ ಶಾಕ್….!!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಕಾರವಾರ ಅಗಸ್ಟ್ 02 : ಪೋಷಕರ ನಿರ್ಲಕ್ಷ್ಯದಿಂದಾಗಿ 8 ತಿಂಗಳ ಮಗು ಮೊಬೈಲ್ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿದ ಪರಿಣಾಮ ಮಗು ಕರೆಂಟ್ ಹೊಡೆದು ಸಾವನಪ್ಪಿದ ಘಟನೆ ಕಾರವಾರದ ಸಿದ್ದರದಲ್ಲಿ ನಡೆದಿದೆ.
ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ಎಂಬವರ 8 ತಿಂಗಳ ಮಗು ಸಾನಿಧ್ಯ ವಿದ್ಯುತ್ ಶಾಕ್ಗೆ ಬಲಿಯಾದ ಕಂದಮ್ಮ. ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್ಅನ್ನು ಆಫ್ ಮಾಡದೇ ನಿರ್ಲಕ್ಷ್ಯವಹಿಸಿದ್ದರು.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್ ಹೊಡೆದು ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login