LATEST NEWS
ರೈಲ್ವೆ ನಿಲ್ದಾಣದಲ್ಲಿ ತಾಯಿಯ ಜೊತೆ ಮಲಗಿದ್ದ ಮಗು ಕದ್ದು ಓಡಿದ ಕಳ್ಳ…!!

ಲಕ್ನೋ: ರೈಲ್ವೆ ನಿಲ್ದಾಣದಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ 7 ತಿಂಗಳ ಮಗುವನ್ನು ವ್ಯಕ್ತಿಯೊಬ್ಬರು ಅಪಹರಣ ಮಾಡಿರುವ ಘಟನೆ ಮಥುರಾ ರೈಲು ನಿಲ್ದಾಣದ ಪ್ಲಾಟ್‍ಫಾರ್ಮ್‍ನಲ್ಲಿ ನಡೆದಿದೆ.
ಈ ಘಟನೆಯ ವೀಡಿಯೋ ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನ್ನ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕದ್ದು ವ್ಯಕ್ತಿ ಓಡಿ ಹೋಗುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಮೊದಲಿಗೆ ಎಲ್ಲರೂ ಮಲಗಿರುವುದನ್ನು ಗಮನಿಸಿದ ವ್ಯಕ್ತಿ ಒಂದೆರಡು ಬಾರಿ ಸುತ್ತಲೂ ಓಡಾಡಿದ್ದಾನೆ. ನಂತರ ಮತ್ತೆ ಹಿಂದಿರುಗಿ ಬಂದು ಮಗುವನ್ನು ನಿಧನವಾಗಿ ಎತ್ತಿಕೊಂಡು ಅಲ್ಲಿಂದ ಓಡಿ ಹೋಗಿದ್ದಾನೆ.

ಇದೀಗ ನಾಪತ್ತೆಯಾಗಿರುವ ಮಗುವನ್ನು ಪತ್ತೆ ಹಚ್ಚಲು ಪೊಲೀಸರು ಹಲವು ತಂಡಗಳನ್ನು ರಚಿಸಿದ್ದಾರೆ. ಅಲ್ಲದೇ ಪ್ರಕರಣ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಜಿಆರ್‌ಪಿ ಪೊಲೀಸ್ ಠಾಣೆಯಲ್ಲಿ ಮಥುರಾ ಜೆಎನ್‍ನಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಿರುವುದಾಗಿ ಮಥುರಾ ಪೊಲೀಸರು ಟ್ವೀಟ್ ಮೂಲಕ ತಿಳಿಸಿದ್ದಾರೆ.