Connect with us

LATEST NEWS

7 ವರ್ಷದ ವೈವಾಹಿಕ ಜೀವನ ಅಂತ್ಯ – ಡೈವೋರ್ಸ್ ಘೋಷಿಸಿದ ಸೈನಾ ನೆಹ್ವಾಲ್‌-ಪರುಪಳ್ಳಿ ಕಶ್ಯಪ್

ನವದೆಹಲಿ ಜುಲೈ 14: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ತಮ್ಮ 7 ವರ್ಷಗಳ ವೈವಾಹಿಕ ಜೀವನಕ್ಕೆ ಅಂತ್ಯಗೊಳಿಸಿದ್ದು, ಪರಸ್ಪರ ಬೇರ್ಪಡುವ ನಿರ್ಧಾರವನ್ನು ಭಾನುವಾರ ಪ್ರಕಟಿಸಿದ್ದಾರೆ.


35 ವರ್ಷ ವಯಸ್ಸಿನ ಸೈನಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. 2018ರಲ್ಲಿ ಸೈನಾ ಅವರು ಬ್ಯಾಡ್ಮಿಂಟನ್ ಆಟಗಾರನಾಗಿದ್ದ ಕಶ್ಯಪ್ ಅವರನ್ನು ವರಿಸಿದ್ದರು.
‘ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಯೋಚಿಸಿ ಕಶ್ಯಪ್ ಮತ್ತು ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸುವೆ’ ಎಂದು ಸೈನಾ ಬರೆದುಕೊಂಡಿದ್ದಾರೆ.


ನೆಹ್ವಾಲ್ ಒಲಿಂಪಿಕ್ಸ್‌ ಕಂಚಿನ ಪದಕ ಮತ್ತು ವಿಶ್ವದ ನಂ. 1 ಶ್ರೇಯಾಂಕ ಪಡೆದಿದ್ದರೆ ಪರುಪಳ್ಳಿ ಕಶ್ಯಪ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನ ಗೆದಿದ್ದರು. ಒಂದು ದಶಕಕ್ಕೂ ಹೆಚ್ಚು ಕಾಲ ಗೆಳೆಯರಾಗಿದ್ದ ಇವರು 2018 ರಲ್ಲಿ ಮದುವೆಯಾಗಿದ್ದರು. ಕ್ರೀಡೆಯಿಂದ ನಿವೃತ್ತರಾದ ನಂತರ ಕಶ್ಯಪ್ ಈಗ ತರಬೇತಿ ನೀಡುತ್ತಿದ್ದರೆ ಸೈನಾ ನೆಹ್ವಾಲ್‌ ಇನ್ನೂ ನಿವೃತ್ತಿ ಹೇಳಿಲ್ಲ. 2019 ರ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ನೆಹ್ವಾಲ್ ಪಿವಿ ಸಿಂಧು ಅವರನ್ನು ಸೋಲಿಸಿದಾಗ ಮೈದಾನದಲ್ಲಿ ಕಶ್ಯಪ್ ಅವರು ಮಾರ್ಗದರ್ಶನ ನೀಡಿದ್ದರು

Share Information
Continue Reading
Advertisement
Click to comment

Leave a Reply

Your email address will not be published. Required fields are marked *