ಬಾಗಲಕೋಟೆ ಡಿಸೆಂಬರ್ 03: ರಸ್ತೆ ಬದಿ ನಿಂತಿದ್ದ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನಪ್ಪಿದ ಘಟನೆ ಜಮಖಂಡಿ ತಾಲೂಕಿನ ಸಿದ್ಧಾಪುರದಲ್ಲಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದೆ.


ಮೃತರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20) ಮತ್ತು ಪ್ರಜ್ವಲ್ (17) ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳಾಗಿದ್ದಾರೆ. ಸಿದ್ದಾಪುರ ಗ್ರಾಮದಿಂದ ನಾಲ್ವರು ಸ್ನೇಹಿತರು ತಡರಾತ್ರಿ ಶಿರೋಳ ಕಾಡಸಿದ್ಧೇಶ್ವರ ದೇವರ ಜಾತ್ರೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಸಿದ್ದಾಪುರ ಬಳಿರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರ್ಯಾಕ್ಟರ್ ಕಾರ್ಖಾನೆ ಬಳಿ ನಿಂತಿತ್ತು. ಈ ಟ್ರ್ಯಾಕ್ಟರ್ ಗೆ ಅತೀ ವೇಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಕಾರು ಭಾಗಶಃ ಟ್ರ್ಯಾಕ್ಟರ್ ನ ಒಳಗೆ ನುಗ್ಗಿದ್ದು, ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಸ್ಥಳಕ್ಕೆ ಜಮಖಂಡಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Share Information