Connect with us

LATEST NEWS

ಕೊಣಾಜೆ ಮುಲಾರ ಗೋಪಾಲಕೃಷ್ಣ ಭಜನಾ ಮಂದಿರ ಭಗವಾ ಧ್ವಜದ ಮೇಲೆ ವಿಕೃತಿ ಮೆರೆದ ದುಷ್ಕರ್ಮಿಗಳು

ಮಂಗಳೂರು ಜನವರಿ 20: ಮಂಗಳೂರಿನಲ್ಲಿ ಧಾರ್ಮಿಕ ಕೇಂದ್ರಗಳ ಮೇಲೆ ದಿನದಿಂದ ದಿನಕ್ಕೆ ದಾಳಿಗಳು ನಡೆಯುತ್ತಿದ್ದು, ಕೊರಗಜ್ಜ ಸನ್ನಿದಿಯಲ್ಲಿ ಕಾಣಿಕೆ ಡಬ್ಬಿಯಲ್ಲಿ ಕಾಂಡೋಂ ಹಾಕಿದ ದುಷ್ಕರ್ಮಿಗಳು, ಅದೇ ರೀತಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಲಾರ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ವಿಕೃತಿ ಮೆರೆದಿದ್ದಾರೆ. ಭಜನಾ ಮಂದಿರದ ಭಗವಾಧ್ವಜದ ಮೇಲೆ ಮಲ ಮೂತ್ರ ವಿಸರ್ಜಿಸಿ ಕಳವಿಗೆ ವಿಫಲ ಯತ್ನ ನಡೆಸಿದ್ದಾರೆ.


ಮಂಗಳವಾರ ಸಂಜೆ ಉಳ್ಳಾಲ ಜಂಕ್ಷನ್ನಿನಲ್ಲಿರುವ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಾಂಡೋಂ ಮತ್ತು ಬಿಜೆಪಿ ಮುಖಂಡರ ಪತ್ರಿಕೆ ಜಾಹೀರಾತಿನಲ್ಲಿ ಅವಾಚ್ಯ ಶಬ್ದಗಳನ್ನು ಬರೆದಿರುವ ಪತ್ರ ಇರುವುದು ಬೆಳಕಿಗೆ ಬರುತ್ತಿದ್ದಂತೆ, ಇದೀಗ ಕೊಣಾಜೆ ಮಂದಿರದಲ್ಲಿ ದುಷ್ಕೃತ್ಯ  ಎಸಗಲಾಗಿದೆ.

ಮಂದಿರದ ಬಾಗಿಲು ಒಡೆಯಲು ಯತ್ನಿಸಿದ ದುಷ್ಕರ್ಮಿಗಳು ಸ್ಥಳದಲ್ಲಿದ್ದಂತಹ ಭಗವಾಧ್ವಜಕ್ಕೆ ಮಲಮೂತ್ರ ವಿಸರ್ಜಿಸಿ ತೆರಳಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಕಮೀಷನರ್ ಭೇಟಿ ನೀಡಿದ್ದಾರೆ. ಕಳವಿಗೆ ಯತ್ನಿಸಿರುವವರು ದುಷ್ಕೃತ್ಯ  ಎಸಗಿರುವ ಸಾಧ್ಯತೆ ಇದೆ ಎಂದು ತಿಳಿಸಿದರು. ಈ ಕುರಿತು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *