Connect with us

    LATEST NEWS

    ಕಾಂಗ್ರೇಸ್ ಪ್ರಣಾಳಿಕೆಯಲ್ಲಿ ಬಜರಂಗದಳ, ಪಿಎಫ್ಐ ನಿಷೇಧ ….!!

    ಬೆಂಗಳೂರು ಮೇ 02: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನಲೆ ಇದೀಗ ಕಾಂಗ್ರೇಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಈ ಬಾರಿಯ ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ತಿಳಿಸಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲೇ ಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು, ಇದೀಗ ತನ್ನ ಪ್ರಣಾಳಿಕೆಯಲ್ಲಿ ಹತ್ತು ಹಲವು ಭರವಸೆಗಳನ್ನು ನೀಡಿದೆ.


    ಸರ್ವಜನಾಂಗದ ಶಾಂತಿಯ ತೋಟ, ಇದುವೇ ಕಾಂಗ್ರೆಸ್ ಬದ್ಧತೆ’ ಎಂಬ ಕಾಂಗ್ರೆಸ್ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಗರದಲ್ಲಿಂದು ಬಿಡುಗಡೆ ಮಾಡಿದರು. ಬಿಜೆಪಿ ಜಾರಿಗೆ ತಂದ ಎಲ್ಲಾ ಜನ ವಿರೋಧಿ ಕಾನೂನುಗಳು ಒಂದು ವರ್ಷದಲ್ಲಿ ರದ್ದುಗೊಳಿಸುವುದರ ಜೊತೆಗೆ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷವನ್ನು ಬಿತ್ತಿ ವಿಭಜನೆಗೆ ಕಾರಣವಾಗುವ, ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.


    ಸಂವಿಧಾನವೇ ಪವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಿಗಳಾಗಲಿ ಭಜರಂಗದಳ ಮತ್ತು ಪಿಎಫ್‍ಐಗಳು ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಇತರರಾಗಲಿ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಷೇಧವೂ ಸೇರಿದಂತೆ ಬಲವಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

    ಅದರಲ್ಲಿ ಕಾಂಗ್ರೇಸ್ ನ 5 ಗ್ಯಾರಂಟಿಗಳು ಸೇರಿದಂತೆ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‍ಇಪಿ) ರದ್ದುಗೊಳಿಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಜೊತೆಗೆ ಪಠ್ಯಪುಸ್ತಕ ಮರಳಿ ಪರಿಷ್ಕರಣೆಗೊಳಿಸಲಾಗುವುದು. ಪಿಯುಸಿಯಿಂದ ಪಿಜಿವರೆಗೂ ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್ ಟಾಪ್, ಡಿಜಿಟಲ್ ನೋಟ್ ಪ್ಯಾಡ್ ಉಚಿತವಾಗಿ ನೀಡಲಾಗುವುದು. ಎರಡು ವರ್ಷಗಳಿಗೊಮ್ಮೆ ಹಿರಿಯ ನಾಗರಿಕರಿಗೆ ರಾಜ್ಯದ 15, ದೇಶದ 10 ಪ್ರವಾಸಿ ತಾಣಗಳಿಗೆ ಉಚಿತ ಯಾತ್ರಾ ಪ್ರವಾಸ ಮಾಡಲಾಗುವುದು ಎಂದು ತಿಳಿಸಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply