Connect with us

    LATEST NEWS

    ಬಜ್ಪೆ ಎಡಪದವು ಬಳಿ ಸರಣಿ ಅಪಘಾತ – ಹಲವು ವಾಹನಗಳು ಜಖಂ

    ಮಂಗಳೂರು ಎಪ್ರಿಲ್ 19: ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿಯಾಗಿ ಹಲವು ವಾಹನಗಳಿಗೆ ಡಿಕ್ಕಿಹೊಡೆದ ಘಟನೆ ಬಜ್ಪೆಯ ಎಡಪದವು ಪೇಟೆಯಲ್ಲಿ ನಡೆದಿದೆ.


    ಮಂಗಳೂರು- ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಈ ಅವಘಡ ನಡೆದಿದ್ದು,  ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿ ಗುದ್ದಿದೆ. ಬಳಿಕ ಖಾಸಗಿ ಬಸ್, ಲಾರಿ , ಕಾರು ಸೇರಿದಂತೆ ಹಲವು ವಾಹನಗಳಿಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಭಾರೀ ಅವಘಡ ತಪ್ಪಿ ಹೋಗಿದೆ.


    ಲಾರಿ ಕಟ್ಟಡಕ್ಕೆ ಗುದ್ದಿದ ಪರಿಣಾಮ ಮೂರು ಅಂಗಡಿಗಳಿಗೆ ಭಾರಿ ಹಾನಿಯಾಗಿದೆ. ಲಾರಿ, ಖಾಸಗಿ ಬಸ್ ಜಖಂ ಗೊಂಡಿದ್ದು, ರಸ್ತೆಬದಿಯಲ್ಲಿ ನಿಲ್ಲಿಸಿದ್ದ ನಾಲ್ಕು ಸ್ಕೂಟರ್ ಗಳು ಜಖಂಗೊಂಡಿದೆ. ಸ್ಥಳಕ್ಕೆ ಬಜ್ಪೆ ಠಾಣಾ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply