Connect with us

    DAKSHINA KANNADA

    ಕಟೀಲು ಕೊಲೆ ಭೇದಿಸಿದ ಬಜ್ಪೆ ಪೊಲೀಸರು,ಜನ್ಮ ಕೊಟ್ಟ ತಾಯಿ ಮೇಲೆ ಅತ್ಯಾಚಾರ ನಡೆಸಿ ಕುತ್ತಿಗೆ ಬಿಗಿದು ಕೊಲೆ ಮಾಡಿದ ವಿಕೃತಕಾಮಿ ಮಗ..!

    ಮಂಗಳೂರು : ಮಂಗಳೂರು ಹೊರ ವಲಯದ ಕಟೀಲು ಗಿಡಿಕೆರೆ ಮಹಿಳೆಯ ಕೊಲೆ ಪ್ರಕರಣವನ್ನು ಬಜ್ಪೆ ಪೊಲೀಸರು ಭೇದಿಸಿದ್ದಾರೆ. ಹೆತ್ತ ತಾಯಿಯನ್ನೇ ಕೊಂದ ಪ್ರಕರಣದಲ್ಲಿ ಭಯಾನಕ ವಿಚಾರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಕೊಲೆಗೂ ಮುನ್ನ ಮಗನೇ ತಾಯಿ ಮೇಲೆ ಅತ್ಯಾಚಾರ ನಡೆಸಿ ಹೇಯ ಮತ್ತು ಭಯಾನಕ ಕೃತ್ಯ ಬೆಳಕಿಗೆ ಬಂದಿದೆ.‌


    ಹೆತ್ತ ತಾಯಿಯನ್ನೇ ಅತ್ಯಾಚಾರಗೈದು ಕೊಂದ ವಿಕೃತಕಾಮಿ ಆರೋಪಿ ಮಗನನ್ನು ಬಜಪೆ ಪೊಲೀಸರು ಸೋಮವಾರ ಬಂಧಿಸಿ ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಟೀಲು ಸಮೀಪದ ಕೊಂಡೆಮೂಲ ನಿವಾಸಿ ರತ್ನ ( 56 ) ಎಂಬವರನ್ನು ಅವರ ಸ್ವಂತ ಮಗ ರವಿರಾಜ್ ಶೆಟ್ಟಿ ( 33 ) ಎಂಬಾತ ಅ.26 ಗುರುವಾರ ರಾತ್ರಿ ಕೊಲೆಗೈದು ಮನೆಗೆ ಬೀಗ ಹಾಕಿ ಕಿನ್ನಿಗೋಳಿಯ ವಸತಿಗೃಹದಲ್ಲಿ ಉಳಿದುಕೊಂಡಿದ್ದ, ಈತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾಯಿಯನ್ನು ಕೊಂದಿರುವುದು ತಾನೇ ಎಂದು ಒಪ್ಪಿಕೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ರತ್ನ ಅವರ ಪತಿ ದಯಾನಂದ ಶೆಟ್ಟಿ ಅವರು 7 ವರ್ಷದ ಹಿಂದೆ ಮೃತಪಟ್ಟಿದ್ದು ಬಳಿಕ ತಾಯಿ ಮಗ ಇಬ್ಬರೇ ಕೊಂಡೆಮೂಲದ ಮನೆಯಲ್ಲಿ ವಾಸವಾಗಿದ್ದರು. ಅರೋಪಿಯು ಗಾಂಜಾ ವ್ಯಸನಿಯಾಗಿದ್ದ ಎನ್ನಲಾಗಿದ್ದು, ಗಾಂಜಾ ಅಮಲಿನಲ್ಲಿ ಅತ್ಯಾಚಾರ ಎಸಗಿರಬಹುದೆಂದು ಶಂಕಿಸಲಾಗಿದೆ. ಮುಖಕ್ಕೆ ಬಟ್ಟೆ ಕಟ್ಟಿ , ಕೈಕಾಲುಗಳಿಗೆ ನೈಲಾನ್ ಹಗ್ಗದಿಂದ ಬಿಗಿದು ಕಟ್ಟಿ ಅತ್ಯಾಚಾರ ವೆಸಗಿ ಕೊಲೆಗೈದಿರುವುದು ವಿಚಾರಣೆಯ ವೇಳೆ ದೃಢಪಟ್ಟಿದೆ. ಆರೋಪಿ ರವಿರಾಜ್ ಶೆಟ್ಟಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಲಾಗಿದ್ದು ವರದಿಗಾಗಿ ಕಾಯಲಾಗುತ್ತಿದೆ. ಡ್ರಗ್ಸ್ , ಗಾಂಜಾ ಸೇವನೆ ಹಾಗೂ ಅತ್ಯಾಚಾರ ಎಸಗಿರುವ ಬಗ್ಗೆ ವೈದ್ಯಕೀಯ ವರದಿ ಬಳಿಕವೇ ದೃಢಪಡಿಸಬಹುದು ಎಂದು ಪೊಲೀಸ್ ಮೂಲಗಳು ಸ್ಪಷ್ಟಪಡಿಸಿವೆ. ಇನ್ಸ್ ಪೆಕ್ಟರ್ ಸಂದೀಪ್ ಮತ್ತು ಅವರ ತಂಡ ಆರೋಪಿ ರವಿರಾಜ್ ಶೆಟ್ಟಿಯನ್ನು ಬಂಧಿಸಿ ಪ್ರಕರಣದ ತನಿಖೆಯನ್ನು ಮುಂದುವರಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply