LATEST NEWS
ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಆರೋಪ – ಹಿಂದೂ ಕಾರ್ಯಕರ್ತರ ವಿರುದ್ದ ಹೆಡ್ ಕಾನ್ಸ್ಟೇಬಲ್ ರಶೀದ್ ದೂರು

ಮಂಗಳೂರು ಮೇ 06: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯಲ್ಲಿ ಬಜ್ಪೆ ಪೊಲೀಸ ಠಾಣೆಯ ಹೆಡ್ ಕಾನ್ಸ್ಟೆಬಲ್ ರಶೀದ್ ಅವರ ಪಾತ್ರ ಇದೆ ಎಂದು ಸಾಮಾಜಿಕ ಜಾಲತಾಣದಗಳಲ್ಲಿ ನಿರಾಧಾರ ಆರೋಪ ಮಾಡಿದ್ದಾರೆ ಎಂದು ಬಜ್ಪೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ರಶೀದ್ ಎಂ. ಶೇಕ್ ದೂರು ನೀಡಿದ್ದಾರೆ. ಈ ಸಂಬಂಧ ಮೂಡುಬಿದಿರೆಯ ಸಮಿತ್‌ರಾಜ್ ಧರೆಗುಡ್ಡೆ ಮತ್ತು ಹಿಂದೂ ಜಾಗರಣ ವೇದಿಕೆಯ ಮುಖಂಡ ಉಲ್ಲಾಸ್ ಟಿ. ಎಂಬವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದೂ ಮುಖಂಡ ಮೂಡಬಿದ್ರೆಯ ಸಮಿತ್ ರಾಜ್ ದರೆಗುಡ್ಡೆ, ಹಿಂದೂ ಜಾಗರಣ ವೇದಿಕೆ ಮುಖಂಡ ಕೆ.ಟಿ.ಉಲ್ಲಾಸ್ ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವಿನಾಕಾರಣ ನನ್ನ ಹೆಸರು ತಂದಿದ್ದಾರೆ. ಯಾವುದೇ ಆಧಾರ ಇಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿದೆ ಎಂದು ಹೆಡ್ ಕಾನ್ಸ್ಟೇಬಲ್ ರಶೀದ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
