Connect with us

    LATEST NEWS

    ದರೋಡೆ ಆರೋಪಿಗಳಿಗೆ ಕೊರೊನಾ ಬಜ್ಪೆ ಪೊಲೀಸ್ ಠಾಣೆ ಸೀಲ್ ಡೌನ್

    ಮಂಗಳೂರು ಜುಲೈ 1: ಮಂಗಳೂರಿನಲ್ಲಿ ಮತ್ತೊಂದು ಪೊಲೀಸ್ ಠಾಣೆಗೆ ಕೊರೊನಾ ಸೊಂಕು ವಕ್ಕರಿಸಿದ್ದು, ದರೊಡೆ ಆರೋಪಿಗಳಿಗೆ ಕೊರೊನಾ ಬಂದ ಹಿನ್ನಲೆ ಮಂಗಳೂರಿನ ಬಜಪೆ ಪೊಲೀಸ್ ಠಾಣೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ.


    ಬಜಪೆ ಪೊಲೀಸರು ದರೊಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಂದರ್ಭ ಮೆಡಿಕಲ್ ಚೆಕಪ್ ಮಾಡಲಾಗಿತ್ತು. ಈ ವೇಳೆ ಇಬ್ಬರು ಆರೋಪಿಗಳಿಗೆ ಕೊರೊನಾ ಪತ್ತೆಯಾಗಿದೆ. ಈ ಹಿನ್ನಲೆ ಬಜಪೆ ಪೊಲೀಸ್ ಠಾಣೆ ಸೀಲ್ ಡೌನ್ ಮಾಡಿ 8 ಮಂದಿ ಪೊಲೀಸ್ ಸಿಬ್ಬಂದಿ ಕ್ವಾರೆಂಟೈನ್ ಮಾಡಲಾಗಿದೆ. ಈ ನಡುವೆ ಮಂಗಳೂರಿನಲ್ಲಿ ಎಸಿಪಿ ಗ್ರೇಡ್ ಅಧಿಕಾರಿಯೊಬ್ಬರಿಗೂ ಕೊರೊನಾ ಸೊಂಕು ಪತ್ತೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 14 ಮಂದಿ ಪೊಲೀಸರಿಗೆ ಕೊರೊನಾ ದೃಢಪಟ್ಟಿದೆ.

    Share Information
    Advertisement
    Click to comment

    You must be logged in to post a comment Login

    Leave a Reply