Connect with us

    LATEST NEWS

    ಬಜ್ಪೆ – ಪ್ರೀತಿ ನಿರಾಕರಿಸಿದ ಯುವತಿ ಮೇಲೆ ಅತ್ಯಾಚಾರ -ಆರೋಪಿ ಆರೆಸ್ಟ್

    ಮಂಗಳೂರು ಡಿಸೆಂಬರ್ 10: ಪ್ರೀತಿ ನಿರಾಕರಿಸಿದ ಯುವತಿಯನ್ನು ಅತ್ಯಾಚಾರಗೈದ ಘಟನೆ ಬಜ್ಪೆಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


    ಬಂಧಿತ ಆರೋಪಿಯನ್ನು ಅಬುಬಕರ್ ಸಿದ್ದಿಕ್ (21) ಎಂದು ಗುರುತಿಸಲಾಗಿದೆ. ಆರೋಪಿ ಹಾಗೂ ಯುವತಿಯ ಪರಿಚಯಸ್ಥರಾಗಿದ್ದು ಒಂದೇ ಕಾಲೇಜಿನಲ್ಲಿ ಕಲಿಯುತ್ತಿದ್ದರು, 2019ರಲ್ಲಿ ನಡೆದ ಬೀಳ್ಕೊಡುಗೆ ಸಮಾರಂಭದಲ್ಲಿ ಇಬ್ಬರು ಜತೆಯಾಗಿ ಫೋಟೋ ತೆಗೆಸಿಕೊಂಡಿದ್ದರು.

    ಈ ಫೋಟೋವನ್ನು ಮುಂದಿಟ್ಟುಕೊಂಡು ಆರೋಪಿ, ಅಬುಬಕರ್ ಸಿದ್ದಿಕ್ ಯುವತಿಯನ್ನು ಪೀಡಿಸುತ್ತಿದ್ದ. ಪ್ರೀತಿ ಮಾಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಾಕುವುದಾಗಿ ಬೆದರಿಸಿದ್ದ. ಯುವತಿ ಡಿಸೆಂಬರ್ 8 ರಂದು ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ವೇಳೆ ಹಿಂಬಾಲಿಸಿಕೊಂಡು ಬಂದು ಆಕೆಯ ಮನೆಗೆ ನುಗ್ಗಿ ಆತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಳು‌. ಪ್ರಕರಣ ದಾಖಲಿಸಿಕೊಂಡ ಬಜ್ಪೆ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ

    Share Information
    Advertisement
    Click to comment

    You must be logged in to post a comment Login

    Leave a Reply