Connect with us

BANTWAL

ವಿಟ್ಲದಲ್ಲಿ ಬಜರಂಗದಳ ಮುಖಂಡನಿಗೆ ಮಾರಕಾಸ್ತ್ರಗಳಿಂದ ಹಲ್ಲೆ

ವಿಟ್ಲ, ಜೂನ್ 19: ಬಜರಂಗದಳದ ವಿಟ್ಲ ಪ್ರಖಂಡ ಸಂಚಾಲಕರಾದ ಚಂದ್ರಹಾಸ ಕನ್ಯಾನ ರವರಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಾಲೆತ್ತೂರಿನಲ್ಲಿ ಇಂದು ಸಂಜೆ ನಡೆದಿದೆ.

ಮಾರಕಾಸ್ತ್ರಗಳೊಂದಿಗೆ ಆಗಮಿಸಿದ 12 ಜನರ ತಂಡವು ಚಂದ್ರಹಾಸ್ ರವರ ಮೇಲೆ ಹಲ್ಲೆ ನಡೆಸಿದ್ದು, ಗಾಯಗೊಂಡ ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಯಾವ ಕಾರಣಕ್ಕೆ ಚಂದ್ರಹಾಸ್ ಮೇಲೆ ತಂಡ ದಾಳಿ ನಡೆಸಿದೆ ಎಂದು ಇನ್ನಷ್ಟೆ ತಿಳಿದು ಬರಬೇಕಿದ್ದು, ವಿಟ್ಲ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ.

Advertisement
Click to comment

You must be logged in to post a comment Login

Leave a Reply