BANTWAL
ಈದ್ ಮೆರವಣಿಗೆಗೆ ಪ್ರತಿಯಾಗಿ ಬಜರಂಗದಳ-ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋಗೆ ಕರೆ
ಮಂಗಳೂರು: ಬಜರಂಗದಳ ಹಾಗೂ ವಿಹೆಚ್‌ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದಾರೆ.
ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಎಸ್ಪಿ ಯತೀಶ್ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಬಿ.ಸಿ.ರೋಡ್‌ಗೆ ಬರದಂತೆ ಮುಂಜಾಗ್ರತಾ ಕ್ರಮವಾಗಿ ಕೈಕಂಬ ಮಸೀದಿ ಪಕ್ಕದಲ್ಲೇ ಮೆರವಣಿಗೆ ಪೊಲೀಸರು ರಸ್ತೆ ಬದಲಾವಣೆ ಮಾಡಿದ್ದಾರೆ.
ಭಾರೀ ಸಂಖ್ಯೆಯಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಬಿ.ಸಿ ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಜಮಾಯಿಸಿದ್ದಾರೆ. ವಿಎಚ್‌ಪಿ ಮುಖಂಡ ಶರಣ್ ಪಂಪ್ ವೆಲ್, ಬಜರಂಗದಳ ಮುಖಂಡ ಪುನೀತ್ ಅತ್ತಾವರ ಸ್ಥಳಕ್ಕೆ ಆಗಮಿಸಿದ್ದಾರೆ. ಕೆಎಸ್‌ಆರ್‌ಪಿ ತುಕಡಿಗಳು, ಆರ್ಮ್ ರಿಸರ್ವ್ ಫೋರ್ಸ್ ಸೇರಿದಂತೆ ವಿವಿಧ ತುಕಡಿಗಳ ಮೊಕ್ಕಾಂ ಹೂಡಿವೆ. ಜೊತೆಗೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.
ವಿಎಚ್‌ಪಿಯ ಬಂಟ್ವಾಳ ಪ್ರಖಂಡ ಅಧ್ಯಕ್ಷ ಪ್ರಸಾದ್ ಕುಮಾರ್ ಮಾತನಾಡಿ, ಭಜರಂಗದಳ ಹಾಗೂ ವಿಎಚ್‌ಪಿಯಿಂದ ಬಿ.ಸಿ.ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಬಿ.ಸಿ.ರೋಡ್ ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್‌ನ ರಕ್ತೇಶ್ವರಿ ದೇವಸ್ಥಾನದ ಎದುರು ಸೇರಿದ ಕಾರ್ಯಕರ್ತರು ನಾವು ಸವಾಲು ಸ್ವೀಕರಿಸಿ ಬಂದಿದ್ದೇವೆ. ನಮ್ಮ ಮುಖಂಡ ಶರಣ್ ಪಂಪ್ ವೆಲ್ ಬರುತ್ತಾರೆ ಅವರಿಗೆ ಸ್ವಾಗತ ಕೋರಲು ಬಂದಿರೋದಾಗಿ ಹೇಳಿಕೊಂಡಿದ್ದಾರೆ. ಈ ನಡುವೆ ಪೊಲೀಸರು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟವೂ ನಡೆದೆ.