LATEST NEWS
ಬಾಳೆಬರೆ ಘಾಟ್ ಭಾರಿ ವಾಹನಗಳ ಸಂಚಾರ ನಿಷೇಧ

ಬಾಳೆಬರೆ ಘಾಟ್ ಭಾರಿ ವಾಹನಗಳ ಸಂಚಾರ ನಿಷೇಧ
ಉಡುಪಿ, ಆಗಸ್ಟ್ 21 : ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಮಾರ್ಗದಲ್ಲಿ ಅಧಿಕ ಭಾರ ಹೊತ್ತ ಸರಕು-ಸಾಗಾಟ ವಾಹನಗಳ ಸಂಚಾರ ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಆದೇಶಿಸಿದ್ದಾರೆ.
ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಮಾರ್ಗದಲ್ಲಿ ಅಧಿಕ ಭಾರ ಹೊತ್ತ ಸರಕು-ಸಾಗಾಟ ವಾಹನಗಳು ಸಂಚರಿಸುತ್ತಿರುವುದರಿಂದ ರಸ್ತೆ ಸೇತುವೆಗಳ ಹಾಳಾಗುವ ಸಂಭವವಿದೆ.

ಆಗಸ್ಟ್ 21 ರಿಂದ ಮುಂದಿನ ಆದೇಶದ ವರೆಗೆ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ ಮಾರ್ಗದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪ್ರದೇಶವಾದ ಕುಂದಾಪುರದ ಮೂಲಕ ಸಂಚರಿಸುವ ಎಲ್ಲಾ ರೀತಿಯ ಭಾರಿ ವಾಹನಗಳಾದ
ಬುಲೆಟ್ ಟ್ಯಾಂಕರ್ಸ್, ಪಿಷ್ ಕಾರ್ಗೋ ಕಂಟೈನರ್ಸ್ ಹಾಗೂ ಲಾಂಗ್ ಚಾಸೀಸ್ ವಾಹನಗಳು, ಹೆವಿ ಕಮರ್ಷಿಯಲ್ ವೆಹಿಕಲ್ಸ್, ಮಲ್ಟಿ ಎಕ್ಸೆಲ್ ಟ್ರಕ್ಸ್, ಟ್ರಕ್ ಟ್ರೈಲರ್ ಮತ್ತು ಎಲ್ಲಾ ಬಗೆಯ ಅಧಿಕ ಭಾರದ ಸರಕು ಸಾಗಾಣಿಕೆ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿರುತ್ತಾರೆ.