KARNATAKA
ಬಳ್ಳಾರಿ ಮಹಾನಗರಪಾಲಿಕೆಗೆ ಮೇಯರ್ ಆದ 21 ವರ್ಷದ ಯುವತಿ

ಬಳ್ಳಾರಿ ಮಾರ್ಚ್ 29: ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಪಟ್ಟಕ್ಕೆ 21 ವರ್ಷ ವಯಸ್ಸಿನ ಯುವತಿ ಆಯ್ಕೆಯಾಗಿದ್ದು, ಈ ಮೂಲಕ ರಾಜ್ಯದ ಅತೀ ಕಿರಿಯ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ 21 ವರ್ಷ ವಯಸ್ಸಿನ ತ್ರಿವೇಣಿ ಬಳ್ಳಾರಿ ಮೇಯರ್ ಆಗುವ ಮೂಲಕ ರಾಜ್ಯದ ಅತಿ ಕಿರಿಯ ಮೇಯರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಮೂವರು ಅಭ್ಯರ್ಥಿಗಳು ಮೇಯರ್ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಿದ್ದರು.ಅದರಲ್ಲಿ ಕ್ರಮವಾಗಿ ನಾಲ್ಕನೇ ವಾರ್ಡ್ ನ ತ್ರಿವೇಣಿ, ಏಳನೇ ವಾರ್ಡಿನ ಉಮಾದೇವಿ ಹಾಗೂ 38 ನೇ ವಾರ್ಡಿನ ಕುಬೇರ ಅವರಿಂದ ನಾಮಪತ್ರ ಸಲ್ಲಿಸಿದ್ದರು.ಈಗ ನಾಲ್ಕನೇ ವಾರ್ಡ್ ನ ತ್ರಿವೇಣಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ, ಉಪಮೇಯರ್ ಆಗಿ 33 ನೇ ವಾರ್ಡಿನ ಜಾನಕಮ್ಮ ಅಧಿಕಾರ ಸ್ವೀಕರಿಸಿದ್ದಾರೆ.