Connect with us

KARNATAKA

ಬಳ್ಳಾರಿ-ವಿಜಯನಗರ ಜಿಲ್ಲೆ ಲೋಕಸಭಾ ಚುನಾವಣಾ ಅಭ್ಯರ್ಥಿಯ ಆಯ್ಕೆ ಮಾಹಿತಿ ಸಂಗ್ರಹಕ್ಕೆ ಶಾಸಕ ವೇದವ್ಯಾಸ್ ಕಾಮತ್

ಬಳ್ಳಾರಿ ಮಾರ್ಚ್ 02: ಬಳ್ಳಾರಿ-ವಿಜಯನಗರ ಜಿಲ್ಲೆಯ ಲೋಕಸಭಾ ಚುನಾವಣಾ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಜಿಲ್ಲೆಯ ಪಕ್ಷದ ಪ್ರಮುಖರ ಅಭಿಪ್ರಾಯವನ್ನು ಸಂಗ್ರಹಿಸುವ ದೃಷ್ಟಿಯಿಂದ ಬಳ್ಳಾರಿಯ ಭಾರತೀಯ ಜನತಾ ಪಾರ್ಟಿ ಕಚೇರಿಗೆ ಮಂಗಳೂರು ನಗರ ದಕ್ಷಿಣದ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿದರು.


ಪಕ್ಷದ ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಮಂಡಲದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಹಾಗೂ ಜಿಲ್ಲೆಯಿಂದ-ಮಂಡಲದಿಂದ ರಾಜ್ಯಕ್ಕೆ ಜವಾಬ್ದಾರಿ ಹೊಂದಿರುವ ಪ್ರಮುಖರಿಂದ ಅಭಿಪ್ರಾಯವನ್ನು ಸಂಗ್ರಹಿಸಲಾಗಿದ್ದು ಅದನ್ನು ರಾಜ್ಯದ ಪ್ರಮುಖರಿಗೆ ಕಳುಹಿಸಿಕೊಡಲಾಗುತ್ತದೆ. ಅಭಿಪ್ರಾಯ ಸಂಗ್ರಹ ದೃಷ್ಟಿಯಿಂದ ಸಂಪೂರ್ಣವಾಗಿ ಸಹಕರಿಸಿದ ಮತ್ತು ಪ್ರೀತಿಪೂರ್ವಕ ಆತಿಥ್ಯ ನೀಡಿದ ಬಳ್ಳಾರಿಯ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರ ಸಹಿತ ಎಲ್ಲ ಪದಾಧಿಕಾರಿಗಳಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.


ಜಿಲ್ಲೆಯ ಲೋಕಸಭಾ ಅಭ್ಯರ್ಥಿಯ ಆಯ್ಕೆ ಪ್ರಕ್ರಿಯೆಯ ಅಭಿಪ್ರಾಯ ಸಂಗ್ರಹದಂತಹ ಮಹತ್ತರ ಜವಾಬ್ದಾರಿಗೆ ತಮ್ಮನ್ನು ನಿಯೋಜಿಸಿದ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ ವಿಜಯೇಂದ್ರ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ರಾಜೇಶ್ ಜಿ.ವಿ ಯವರಿಗೂ ಶಾಸಕರು ವಿಶೇಷ ಧನ್ಯವಾದಗಳನ್ನು ಸಮರ್ಪಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *