Connect with us

  BANTWAL

  ಬಂಟ್ವಾಳ : ಅಕ್ರಮ ಮರ ಮಟ್ಟುಗಳ ಸಾಗಾಟ-ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತು ವಶ..!

  ಅಕ್ರಮವಾಗಿ ಮರ ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿ ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಬಂಟ್ವಾಳದ ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

  ಬಂಟ್ವಾಳ : ಅಕ್ರಮವಾಗಿ ಮರ ಮಟ್ಟುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಖಚಿತ ಮಾಹಿತಿ ಮೇಲೆ ದಾಳಿ ಮಾಡಿ ಆರೋಪಿ ಸಹಿತ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಬಂಟ್ವಾಳದ ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

  ವಶಕ್ಕೆ ಪಡೆದ  ವಾಹನ ಮತ್ತು ಸೊತ್ತಿನ  ಮೌಲ್ಯ ರೂ. 3 ಲಕ್ಷ  ಎಂದು ಅಂದಾಜಿಸಲಾಗಿದೆ.

  ಸೆಪ್ಟೆಂಬರ್ 12 ರಂದು ರಂದು ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕು ಬಡಗ ಬೆಳ್ಳೂರು ಗ್ರಾಮದ ಸಾಣೂರು ಎರ್ಮಾಳ್ ಪದವು ರಸ್ತೆ ಯ ಪಟ್ಟಾಜೆ ಎಂಬಲ್ಲಿ ಅಕ್ರಮವಾಗಿ ಕಾಡು ಜಾತಿಯ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಮಾಹಿತಿ ಪಡೆದ ಅಧಿಕಾರಿಗಳು ಪತ್ತೆ ಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ.

  ಬಂಟ್ವಾಳ ವಲಯ ಅರಣ್ಯ ಅಧಿಕಾರಿ ರಾಜೇಶ್ ಬಳಿಗಾರ, ಉಪವಲಯ ಅರಣ್ಯಾಧಿಕಾರಿ ಯಶೋಧರ ,ಗಸ್ತು ಅರಣ್ಯ ಪಾಲಕರಾದ ಜಿತೇಶ್ ಪಿ. ,ಶೋಭಿತ್ ,ಹಾಗೂ ಇಲಾಖಾ ವಾಹನ ಹಂಗಾಮಿ ಚಾಲಕ ಜಯರಾಮ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

  ಪ್ರಕರಣದ ಮುಂದಿನ ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟೋನಿ ಎಸ್ ಮರಿಯಪ್ಪ ಅವರ ನಿರ್ದೇಶನದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್ ಪಿ ಇವರ ಮಾರ್ಗದರ್ಶನದಲ್ಲಿ ವಲಯ ಅಧಿಕಾರಿ ರಾಜೇಶ್ ಬಳೆಗಾರ ಅವರು  ನಡೆಸುತ್ತಿದ್ದಾರೆ.

  Share Information
  Advertisement
  Click to comment

  You must be logged in to post a comment Login

  Leave a Reply