ಕೊರೊನಾ ಹಿನ್ನೆಲೆ ಮಸೀದಿಗಳಲ್ಲಿ ಪ್ರಾರ್ಥನೆಗೆ ನಿರ್ಬಂಧ

ಉಡುಪಿ ಮಾರ್ಚ್ 23 : ಕೋವಿಡ್-19 (ಕೊರೊನಾ ವೈರಾಣು ಕಾಯಿಲೆ 2019) ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ, ಉಭಯ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ದೈನಂದಿನ ಪ್ರಾರ್ಥನೆಗಳನ್ನು (ಶುಕ್ರವಾರದ ಜುಮ್ಮಾ ಪ್ರಾರ್ಥನೆ ಸೇರಿದಂತೆ) ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲೆಯಾದ್ಯಂತ ಮಾ. 23 ರಿಂದ ಮಾ. 31 ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.