Connect with us

MANGALORE

ಪುಂಡಾಟಿಕೆ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು ಅಗಸ್ಟ್ 12: ಪುಲಿಕೇಶಿ ನಗರದಲ್ಲಿ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ಪೊಲೀಸರ ಮೇಲೆ ಹಲ್ಲೆ ಮಾಡಿದ್ದು ಅಕ್ಷರಶಃ ಅಪರಾಧ. ಇದರಿಂದ ಸಾರ್ವಜನಿಕ ಆಸ್ತಿ ನಷ್ಟಕ್ಕೆ ಕಾರಣವಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕಿದೆ. ಪೊಲೀಸ್ ಠಾಣೆಯ ಪೀಠೋಪಕರಣ ಧ್ವಂಸ ಮಾಡಿದ್ದು ಶಿಕ್ಷಾರ್ಹ ಅಪರಾಧ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರ್ದಾಕ್ಷಿಣ್ಯ ಕ್ರಮಕ್ಕೆ ಆದೇಶಿಸಿದ್ದಾರೆ.

ಹಾಗೂ ನಾನು ಸಿಎಂ ಅವರ ಆದೇಶವನ್ನು ಸ್ವಾಗತ ಮಾಡುತ್ತೇನೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅಭಿಪ್ರಾಯ ಭೇದ ಇದ್ದರೆ ಮುಕ್ತವಾಗಿ ಚರ್ಚೆಗೆ ಅವಕಾಶ ಇದೆ. ಪುಂಡಾಟಿಕೆ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು . ಇಂತಹ ಪುಂಡಾಟಿಕೆ ರಾಜ್ಯದಲ್ಲಿ ಇನ್ನು ಮುಂದೆ ನಡೆಯಬಾರದು. ಸಿಎಂ ಗೃಹಸಚಿವರ ಕ್ರಮವನ್ನು ನಾವು ಸ್ವಾಗತ ಮಾಡುತ್ತೇವೆ ಎಂದು ಉಡುಪಿಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದಾರೆ.

Facebook Comments

comments