LATEST NEWS
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ KSRTC ಬಸ್ ಭೀಕರ ಅಪಘಾತ: ಎಂಟು ಮಂದಿ ದುರ್ಮರಣ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ KSRTC ಬಸ್ ಭೀಕರ ಅಪಘಾತ: ಎಂಟು ಮಂದಿ ದುರ್ಮರಣ
ಪುತ್ತೂರು, ಜನವರಿ 13 : ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ರಸ್ತೆ ಬದಿಯ ಹಳ್ಳಕ್ಕೆ ಐರಾವತ ಬಸ್ ಪಲ್ಟಿಯಾಗಿ ಎಂಟು ಮಂದಿ ದುರ್ಮರಣ ಹೊಂದಿದ್ದು, 20ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ.

ಮೃತರನ್ನು ಬಸ್ ಚಾಲಕ ಲಕ್ಷ್ಮಣ್, ಕಂಡಕ್ಟರ್ ಶಿವಪ್ಪ, ಬೆಂಗಳೂರಿನ ಗಂಗಾಧರ್, ಮಂಗಳೂರು ಮೂಲದ ಡಯಾನ, ಬೆಳ್ತಂಗಡಿಯ ಬಿಜೋ ಎಂದು ಗುರುತಿಸಲಾಗಿದೆ. ಉಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು.
ಹಾಸನದ ಕೃಷಿ ಕಾಲೇಜು ಬಳಿ ವೇಗವಾಗಿ ಬಂದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಎಡ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ.
ದುರಂತಕ್ಕೆ ಅತಿವೇಗ ಹಾಗೂ ಚಾಲಕನ ನಿರ್ಲಕ್ಷ್ಯ ಕಾರಣ ಎಂದು ಪ್ರಾರ್ಥಮಿಕ ತನಿಖೆಯಿಂದ ಗೊತ್ತಾಗಿದೆ.
ಮೃತದೇಹಗಳನ್ನು ಹಾಸನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಾಂತಿಗ್ರಾಮದ ಬಳಿ ಸಾರಿಗೆ ಬಸ್ ಅಪಘಾತಕ್ಕೆ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಗಾಯಾಳುಗಳ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ನಿಗಮದಿಂದ ಭರಿಸಲಾಗುವುದು, ಸ್ಥಳಕ್ಕೆ ತೆರಳಲು ಹಿರಿಯ ಅಧಿಕಾರಿಗಳ ತಂಡ ನಿಯೋಜಿಸಲಾಗಿದೆ ಎಂದು ಹೇಳಿದ್ದಾರೆ.