Connect with us

    LATEST NEWS

    ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಕಾಮಗಾರಿ – ಬೆಂಗಳೂರು–ಮಂಗಳೂರು ನಡುವಿನ ಎಲ್ಲಾ ರೈಲು ರದ್ದು

    ಮಂಗಳೂರು ಮಾರ್ಚ್ 16: ಮಂಗಳೂರಿನ ಪಡೀಲ್ ಮತ್ತು ಕುಲಶೇಖರ ನಿಲ್ದಾಣಗಳ ನಡುವೆ ಜೋಡಿ ಮಾರ್ಗದ ಕಾಮಗಾರಿ ನಡೆಸಲು ಮುಂದಾಗಿರುವ ಹಿನ್ನಲೆ ಗುರುವಾರದಿಂದಲೇ 18 ರೈಲುಗಳ ಸಂಚಾರವನ್ನು ನೈರುತ್ಯ ರೈಲ್ವೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.


    ಸುಬ್ರಹ್ಮಣ್ಯ ರಸ್ತೆ– ಮಂಗಳೂರು ಸೆಂಟ್ರಲ್‌ (ಗಾಡಿ ಸಂಖ್ಯೆ 06488/06489) ಮಧ್ಯದ ಪ್ರಯಾಣಿಕರ ವಿಶೇಷ ರೈಲು, ಮಂಗಳೂರು ಸೆಂಟ್ರಲ್– ಕಬಕ ಪುತ್ತೂರು ಪ್ರಯಾಣಿಕರ ರೈಲುಗಳು(06487/06486) ಮಾ.17ರಿಂದ 20ರವರೆಗೆ ಸಂಚರಿಸುವುದಿಲ್ಲ.
    ಪುಣೆ– ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲು(11097/11098) ಮಾರ್ಚ್ 19ರಂದು ಮತ್ತು 21ರಂದು ರದ್ದಾಗಿದೆ. ಯಶವಂತಪುರ– ಕಾರವಾರ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ(16515/16516) ಮಾರ್ಚ್18 ಮತ್ತು 19ರಂದು ರದ್ದಾಗಿದೆ. ಯಶವಂತಪುರ–ಮಂಗಳೂರು ಎಕ್ಸ್‌ಪ್ರೆಸ್‌ ರೈಲು(16575/16576) ಮಾರ್ಚ್ 17 ಮತ್ತು 18ರಂದು ರದ್ದು. ಯಶವಂತಪುರ–ಮಂಗಳೂರು ಎಕ್ಸ್‌ಪ್ರೆಸ್‌(16539/16540) ರೈಲು ಮಾರ್ಚ್ 19 ಮತ್ತು 20ರಂದು ಸಂಚರಿಸುವುದಿಲ್ಲ.

    ಬೆಂಗಳೂರು–ಕಾರವಾರ ಎಕ್ಸ್‌ಪ್ರೆಸ್‌(16595/16596), ಯಶವಂತಪುರ–ಕಣ್ಣೂರು ಎಕ್ಸ್‌ಪ್ರೆಸ್‌(16511/16511), ಕೆಎಸ್ಆರ್ ಬೆಂಗಳೂರು – ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್(16585/16586) ರೈಲುಗಳು ಸಂಚಾರ ಮಾ.19 ಮತ್ತು 20ರಂದು ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ ಹೆಗಡೆ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply