Connect with us

    KARNATAKA

    ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

    ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆ ನಡೆದಿದೆ. ಈ ಗಲಭೆಗೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಹಿನ್ನೆಲೆಯಲ್ಲಿ ಮುಖ್ಯ ಆರೋಪಿ ನವೀನ್ ನನ್ನು ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ಇಸ್ಲಾಂ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಅಲ್ಪಸಂಖ್ಯಾತರ ಗುಂಪು ಕಳೆದ ರಾತ್ರಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರ ಮನೆ ಮೇಲೆ ಏಕಾಏಕಿ ದಾಳಿ ನಡೆಸಿ ತೀವ್ರ ದಾಂಧಲೆ ನಡೆಸಿತ್ತು.


    ಮುಖ್ಯ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸೇರಿದಂತೆ ಸುಮಾರು 60 ಮಂದಿ ಪೊಲೀಸ್ ಸಿಬ್ಬಂದಿ ಗಲಭೆಯಲ್ಲಿ ಗಾಯಗೊಂಡಿದ್ದಾರೆ. ಈ ಸಂಬಂಧ ಇದುವರೆಗೆ 110 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಜನರು ಗಲಭೆ ಸೃಷ್ಟಿಸದೆ ಶಾಂತಿ ಕಾಪಾಡುವಂತೆ ಮನವಿ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply