Connect with us

    KARNATAKA

    ಮನೆ ಟೆರೇಸ್ ಮೇಲೆ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಬುದ್ದಿ ಕಲಿಸಿದ ಯುವತಿ

    ಬೆಂಗಳೂರು: ಮನೆ ಟೆರೇಸ್ ಮೇಲೆ ನಿಂತು ಯುವತಿಯ ಎದುರು ಪ್ಯಾಂಟ್ ಬಿಟ್ಟಿ ಅಸಭ್ಯವಾಗಿ ವರ್ತಿಸಿದ ಯುವಕನಿಗ ಯುವತಿಯೊಬ್ಬಳು ಬುದ್ದಿಕಲಿಸಿದ ಘಟನೆ ಬೆಂಗಳೂರಿನ ಕೋರಮಂಗಲದಲ್ಲಿ ನಡೆದಿದೆ.


    ನೂಪುರ್ ಸರಸ್ವತ್ ಎಂಬ ಯುವತಿ ಒಂದು ತಿಂಗಳ ಹಿಂದೆಯಷ್ಟೇ ಕೊರಮಂಗಲದ ಅಪಾರ್ಟ್‍ಮೆಂಟ್ ಒಂದಕ್ಕೆ ವಾಸಸ್ಥಳವನ್ನು ಬದಲಿಸಿದ್ದರು. ಹೀಗೆ ಒಮ್ಮೆ ಇವರು ಮನೆಯಲ್ಲಿದ್ದ ಸಂದರ್ಭದಲ್ಲಿ ಅಪಾರ್ಟ್‍ಮೆಂಟ್ ಪಕ್ಕದ ಬಿಲ್ಡಿಂಗ್‍ನಲ್ಲಿದ್ದ ಯುವಕ ಟೆರೇಸ್ ಮೇಲೆ ನಿಂತು ಅಸಭ್ಯವಾಗಿ ವರ್ತಿಸಿದ್ದಾನೆ. ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು ಆರೋಪಿ ಯುವಕ ಟೆರೇಸ್ ಮೇಲೆ ತನ್ನ ಪ್ಯಾಟ್ ಬಿಚ್ಚಿ ನನ್ನ ಕಡೆ ಅಸಹ್ಯವಾಗಿ ನಗು ಬೀರಿದ್ದ. ನಾನು ಫೋಟೋ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿ ಕ್ಯಾಮೆರಾ ತೆಗೆದುಕೊಂಡೆ. ಆ ವೇಳೆಗೆ ಆತ ಪ್ಯಾಟ್ ಹಾಕಿಕೊಂಡು ಅಲ್ಲಿಯೇ ನನ್ನನ್ನು ನೋಡುತ್ತಾ ನಿಂತಿದ್ದ ಎಂದು ಬರೆದುಕೊಂಡಿದ್ದಾರೆ.

    ನವೆಂಬರ್ 8 ರಂದು ಸಾಮಾಜಿಕ ಜಾಲತಾಣ ಇನ್‍ಸ್ಟಾದಲ್ಲಿ ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಯುವಕನ ವಿರುದ್ಧ ಕ್ರಮಕೈಗೊಳ್ಳಲು ಮನವಿ ಮಾಡಿದ್ದರು. ಆತನ ಫೋಟೋಗಳನ್ನು ಇನ್‍ಸ್ಟಾದಲ್ಲಿ ಹಂಚಿಕೊಂಡಿದ್ದ ಅವರು, ಘಟನೆಯ ಕುರಿತು ಮಾಹಿತಿ ನೀಡಿ ಪೋಸ್ಟ್ ಮಾಡಿದ್ದರು.

     

    ಯುವನಿಗೆ ಬುದ್ಧಿ ಕಲಿಸಲು ಮುಂದಾದ ನೂಪುರ್ ಮನೆಯ ಮಾಲೀಕರಿಗೆ ಮಾಹಿತಿ ನೀಡಿದ್ದರು. ಆದರೆ ಮಾಲೀಕರು ನೂಪುರ್ ಅವರಿಗೆ ಕರುಣೆಯಿಂದ ನೋಡಿ ಪೊಲೀಸರಿಗೆ ದೂರು ನೀಡಲು ಸಲಹೆ ನೀಡಿದ್ದರು. ಇತ್ತ ಆತನಿಗೆ ಬುದ್ಧಿ ಕಲಿಸಲು ನಿರ್ಧರಿಸಿದ್ದ ನೂಪುರ್, ತನಗಾದ ಆಘಾತಕಾರಿ ಅನುಭವವನ್ನು ಫೋಟೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ವಕೀಲರು, ಮಹಿಳಾ ಸಹಾಯವಾಣಿ ಹಾಗೂ ಸ್ನೇಹಿತ ನೆರವು ಕೋರಿದ್ದರು. ನವೆಂಬರ್ 9 ರಂದು ಕೋರಮಂಗಲ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಕೂಡಲೇ ಕಾರ್ಯ ಪ್ರವೃತ್ತರಾದ ಪೊಲೀಸರು ವಿವೇಕ್‍ನಗರದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಬಳಿಕ ಆರೋಪಿಯನ್ನು ಗುರುತಿಸಿ ಬಂಧಿಸಿದ್ದರು. ಪೊಲೀಸ್ ಠಾಣೆಗೆ ತೆರಳಿದ್ದ ನೂಪುರ್ ಅವರು ಆರೋಪಿಯ ವಿರುದ್ಧ ದೂರು ಕೂಡ ದಾಖಲಿಸಿದ್ದರು. ನೂಪುರ್ ದಿಟ್ಟ ತನವನ್ನು ತಿಳಿದಿ ಸ್ಥಳೀಯ ನಿವಾಸಿಗಳು ಅವರಿಗೆ ಪ್ರಶಂಸೆಗಳನ್ನು ವ್ಯಕ್ತಪಡಿಸಿದ್ದಾರೆ.

    ಮೊದಲು ಆರೋಪಿಗೆ ಎಚ್ಚರಿಕೆ ನೀಡಿ ಬಿಡುಗಡೆ ಮಾಡಬೇಕಾಗುತ್ತದೆ ಎಂದು ಪೊಲೀಸರು ನೂಪುರ್ ಅವರಿಗೆ ತಿಳಿಸಿದ್ದರು. ಅಲ್ಲದೇ ಪ್ರಕರಣದ ಸಂಬಂಧ ವಕೀಲರನ್ನು ಭೇಟಿ ಮಾಡಲು ಸಲಹೆ ನೀಡಿದ್ದರು. ಆದರೆ ಇದು ಸುದೀರ್ಘ ಪ್ರಕ್ರಿಯೆ ಆಗಿರುವ ಅವರು ಇದರಿಂದ ಹೊರಗೆ ಬರಲು ನಿರ್ಧರಿಸಿದ್ದರು. ಎರಡು ದಿನಗಳ ಅವಧಿಯಲ್ಲಿ ನಡೆದ ಘಟನೆಗಳ ಬಗ್ಗೆ ಪ್ರತಿಕ್ರಿಯೆ ನೀಡಿರುವ ನೂಪುರ್, ಇಂತಹ ಸಂದರ್ಭದಲ್ಲಿ ಮೌನವಾಗಿರಬಾರದು. ನಿಮಗೆ ಕಿರುಕುಳವಾಗುತ್ತಿದ್ದರೆ ಧ್ವನಿ ಎತ್ತಿ ಇತರರಿಗೆ ತಿಳಿಸಿ ಸಹಾಯ ಪಡೆಯಿರಿ ಎಂದು ತಿಳಿಸಿದ್ದಾರೆ. ಸದ್ಯ ಯುವಕನನ್ನು ಪೊಲೀಸರು ಬಿಡುಗಡೆ ಮಾಡಿದ್ದರೂ, ಶೀಘ್ರವೇ ಅವನನ್ನು ಮನೆಯಿಂದ ಹೊರ ಹಾಕುವುದಾಗಿ ಮಾಲೀಕರು ತಿಳಿಸಿದ್ದಾಗಿ ಹೇಳಿದ್ದಾರೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *