LATEST NEWS
ಮಲ್ಪೆ – ಅಕ್ರಮವಾಗಿ ಉಡುಪಿಗೆ ಆಗಮಿಸಿದ್ದ 7 ಮಂದಿ ಬಾಂಗ್ಲಾದೇಶಿಗರು ಪೊಲೀಸರ ವಶಕ್ಕೆ
ಉಡುಪಿ ಅಕ್ಟೋಬರ್ 12: ನಕಲಿ ಆಧಾರ ಜೊತೆ ಉಡುಪಿಗೆ ಕೆಲಸಕ್ಕೆ ಬಂದಿದ್ದ 7 ಮಂದಿ ಬಾಂಗ್ಲಾದೇಶಿಗರನ್ನು ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೀನುಗಾರಿಕಾ ಕೆಲಸಕ್ಕೆಂದು ಬಾಂಗ್ಲಾದೇಶದಿಂದ ವಲಸೆ ಬಂದಿರುವ ಇವರು ವಡಬಾಂಡೇಶ್ವರದ ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗುತ್ತಿದ್ದರು.ಇವರನ್ನು ಮಲ್ಪೆ ಪೊಲಿಸರು ಶುಕ್ರವಾರ ರಾತ್ರಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ತೆರಳಲು ಪ್ರಯತ್ನಿಸಿದ್ದ ಮಹಮ್ಮದ್ ಮಾಣಿಕ್ ಎಂಬಾತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಮಲ್ಪೆಯಲ್ಲಿ ಇರುವವರ ಬಗ್ಗೆ ಮಾಹಿತಿ ನೀಡಿದ್ದ. ಇಮಿಗ್ರೇಷನ್ ಅಧಿಕಾರಿಗಳ ಪರಿಶೀಲನೆ ವೇಳೆ ಈತ ಬಾಂಗ್ಲಾದೇಶದ ಮಾಣಿಕ್ ಚೌಕ್ ರಾಜಶಾಹಿ ಎಂದು ತಿಳಿದುಬಂದಿದೆ. ಈತನ ವಿಚಾರಣೆ ವೇಳೆ ಹಲವರು ಮಲ್ಪೆಯಲ್ಲಿರುವುದು ಪತ್ತೆಯಾಗಿದೆ.
ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್, ಮೊಹಮ್ಮದ್ ಸೋಜಿಬ್, ಕಾಜೋಲ್, ಉಸ್ಮಾನ್ ಬಂಧಿತರು. ಇವರು ನಕಲಿ ದಾಖಲಾತಿ ಸೃಷ್ಟಿಸಿ ಮಲ್ಪೆಯಲ್ಲಿ ತಂಗಿದ್ದರು. ಆರೋಪಿಗಳ ಬಳಿ ನಕಲಿ ಆಧಾರ್ ಕಾರ್ಡ್ ಪತ್ತೆಯಾಗಿದೆ. ಆರೋಪಿ ಉಸ್ಮಾನ್ ಎಂಬಾತ ಅಕ್ರಮವಾಗಿ ಕರೆತಂದು ಇವರಿಗೆ ಉದ್ಯೋಗಕ್ಕೆ ವ್ಯವಸ್ಥೆ ಮಾಡಿದ್ದ. ಇವರನ್ನು ವಶಕ್ಕೆ ಪಡೆದಿರುವ ಮಲ್ಪೆ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
You must be logged in to post a comment Login