LATEST NEWS
ಬಾಂಗ್ಲಾದೇಶ ದಂಗೆ – ಪ್ರಧಾನಿ ಒಳ ಉಡುಪುಗಳನ್ನು ದೋಚಿದ ಪ್ರತಿಭಟನಾಕಾರರು

ಬಾಂಗ್ಲಾದೇಶ ಅಗಸ್ಟ್ 06: ಮೀಸಲಾತಿ ಸಂಬಂಧಿಸಿದಂತೆ ಉಂಟಾದ ಪ್ರತಿಭಟನೆ ಬಾಂಗ್ಲಾದೇಶದಲ್ಲಿ ಕ್ಷಿಪ್ರ ಕ್ರಾಂತಿಯನ್ನು ತಂದಿದೆ. ಈಗಾಗಲೇ ದೇಶವನ್ನು ಬಿಟ್ಟು ಪ್ರಧಾನಿ ಶೇಖ್ ಹಸೀನಾ ಭಾರತಕ್ಕೆ ಬಂದಿದ್ದು, ಈ ನಡುವೆ ಪ್ರತಿಭಟನಾಕಾರರು ನಿರ್ಗಮಿತ ಪ್ರಧಾನಿ ಶೇಕ್ ಹಸೀನಾ ಅವರ ಗಾನಾಭವನ ನಿವಾಸಕ್ಕೆ ನುಗ್ಗಿದ್ದ ಪ್ರತಿಭಟನಾಕಾರರು ಸಿಕ್ಕಿದ್ದನ್ನೂ ದೋಚಿದ್ದಲ್ಲದೇ ಸೀರೆ, ಒಳಉಡುಪುಗಳನ್ನೂ ಹೊತ್ತೊಕೊಂಡು ಹೋಗಿದ್ದಾರೆ.
ಈ ಕುರಿತ ಫೋಟೊ, ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕೆಲವರು ಸೀರೆಯನ್ನು ದೋಚಿ ಅವುಗಳನ್ನು ಉಟ್ಟುಕೊಂಡು ಸಂಭ್ರಮಿಸುತ್ತಾ ಸಾಗಿದ್ದಾರೆ.ಇನ್ನೂ ಕೆಲವರು ಶೇಕ್ ಹಸೀನಾ ಅವರ ಒಳಉಡುಪುಗಳನ್ನೂ ದೋಚಿ ಅವುಗಳನ್ನು ಪ್ರದರ್ಶಿಸುತ್ತಾ ವಿಜೃಂಭಿಸಿದ್ದಾರೆ.

ಗಾನಾಭವನದ ಕೊಳದಲ್ಲಿ ಈಜಾಡಿ, ನಿವಾಸದಿಂದ ಸೋಫಾ, ಕುರ್ಚಿ, ಹೂಕುಂಡಗಳನ್ನು ತೆಗೆದುಕೊಂಡು ಹೋಗಿದ್ದಾರೆ.