Connect with us

    LATEST NEWS

    ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು MDMA ಹೊಂದಿದ ಆರೋಪಿಗಳ ಸೆರೆ

    ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು MDMA ಹೊಂದಿದ ಆರೋಪಿಗಳ ಸೆರೆ

    ಮಂಗಳೂರು ಫೆಬ್ರವರಿ 10 :ಮಂಗಳೂರು ನಗರದ ಸಾರ್ವಜನಿಕರಿಗೆ ಮಾದಕ ವಸ್ತು MDMA ಮುಂಬೈಯಿಂದ ಖರೀದಿಸಿ ಮಂಗಳೂರಿಗೆ ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮಂಗಳೂರಿನ ಮೊಹಮ್ಮದ್ ಶರೀಫ್ , ಮೊಹಮ್ಮದ್ ಶಾಫಿ, ಮೊಹಮ್ಮದ್ ಅನಾಸ್ ಎಂದು ಗುರುತಿಸಲಾಗಿದೆ.

    ಬಂಧಿತ ಆರೋಪಿಗಳು ಮುಂಬೈನಿಂದ ನಿಷೇಧಿತ ಮಾದಕ ವಸ್ತುವಾದ (Methylene dioxy methamphetamine) MDMA ವನ್ನು ಅಕ್ರಮವಾಗಿ ಖರೀದಿಸಿ ಮಂಗಳೂರಿಗೆ ಐಷಾರಾಮಿ ಕಾರೊಂದರಲ್ಲಿ ತರುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಬಳಿ ಕಾರನ್ನು ತಪಾಸಣೆ ಮಾಡಿದಾಗ ಸಿಕ್ಕಿಬಿದ್ದಿದ್ದಾರೆ.

    ಬಂಧಿತರಿಂದ 87,560/- ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು, 3 ಮೊಬೈಲ್ ಫೋನ್ ಗಳು, ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಐಷಾರಾಮಿ ಬಿಎಂಡಬ್ಲೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply